ADVERTISEMENT

18 ಜನರಿಗೆ ಕೊರೊನಾ 20 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 17:01 IST
Last Updated 28 ನವೆಂಬರ್ 2020, 17:01 IST

ಶಿವಮೊಗ್ಗ: ಜಿಲ್ಲೆಯಲ್ಲಿ ಶನಿವಾರ 18 ಜನರಿಗೆ ಕೊರೊನಾ ದೃಢಪಟ್ಟಿದ್ದು, 20 ಮಂದಿ ಗುಣಮುಖರಾಗಿದ್ದಾರೆ.

1699 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, 1526 ಮಂದಿಯ ವರದಿ ನೆಗೆಟಿವ್ ಬಂದಿದೆ. ಮನೆಯಲ್ಲಿ 61 ಸೇರಿ ಒಟ್ಟು 137 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 348ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 21,531ಕ್ಕೆ ತಲುಪಿದೆ. ಈವರೆಗೆ 20,609 ಮಂದಿ ಗುಣಮುಖರಾಗಿದ್ದಾರೆ.

ಶಿವಮೊಗ್ಗ ತಾಲ್ಲೂಕಿನಲ್ಲಿ 8, ಭದ್ರಾವತಿಯಲ್ಲಿ 4, ಶಿಕಾರಿಪುರ 2, ಸೊರಬದಲ್ಲಿ 1, ಸಾಗರದಲ್ಲಿ ಮೂರು ಜನರಿಗೆ ಕೊರೊನಾ ಸೋಂಕು ತಗುಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.