ADVERTISEMENT

ಕೊರೊನಾ: 2,492 ವರದಿ ನೆಗೆಟಿವ್

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 4:51 IST
Last Updated 26 ನವೆಂಬರ್ 2020, 4:51 IST

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 15 ಜನರಿಗೆ ಕೊರೊನಾ ದೃಢಪಟ್ಟಿದ್ದು, 24 ಮಂದಿ ಗುಣಮುಖರಾಗಿದ್ದಾರೆ.

2,275 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, 2492 ಮಂದಿಯ ವರದಿ ನೆಗೆಟಿವ್ ಬಂದಿದೆ. ಮನೆಯಲ್ಲಿ 55 ಸೇರಿ ಒಟ್ಟು 111 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 348ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 21,466ಕ್ಕೆ ತಲುಪಿದೆ. ಈವರೆಗೆ 20,570ಮಂದಿ ಗುಣಮುಖರಾಗಿದ್ದಾರೆ.

ಶಿವಮೊಗ್ಗ ತಾಲ್ಲೂಕಿನಲ್ಲಿ 6, ಭದ್ರಾವತಿಯಲ್ಲಿ 4, ತೀರ್ಥಹಳ್ಳಿಯಲ್ಲಿ 3, ಸೊರಬದಲ್ಲಿ ಹಾಗೂ ಸಾಗರದಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.