ADVERTISEMENT

ಶಿವಮೊಗ್ಗ: ಇಬ್ಬರಿಗೆ ಕೊರೊನಾ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 3:57 IST
Last Updated 7 ಜನವರಿ 2021, 3:57 IST

ಶಿವಮೊಗ್ಗ: ಜಿಲ್ಲೆಯಲ್ಲಿ ಈಚೆಗೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಸೋಂಕಿತರ ಸಂಖ್ಯೆ ಒಂದಂಕಿಗೆ ಇಳಿದಿದೆ. ಬುಧವಾರ ಇಬ್ಬರಿಗೆ ಸೋಂಕು‌ ತಗುಲಿದೆ. 11 ಜನರು ಗುಣಮುಖರಾಗಿದ್ದಾರೆ.

ಭದ್ರಾವತಿ, ತೀರ್ಥಹಳ್ಳಿಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.4509 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ಹಿಂದಿನ ದಿನಗಳ ಪರೀಕ್ಷಾ ವರದಿಯೂ ಸೇರಿ 2386 ಮಂದಿಯ ವರದಿ ನೆಗೆಟಿವ್ ಬಂದಿದೆ.

ಮನೆಗಳಲ್ಲಿ 56 ಸೇರಿ ಒಟ್ಟು 87 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌ನಿಂದ 348 ಜನರು ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.