ADVERTISEMENT

ಕೊರೊನಾ: ನಾಲ್ವರು ಗುಣಮುಖ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 2:53 IST
Last Updated 19 ಫೆಬ್ರುವರಿ 2021, 2:53 IST

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ 9 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 4 ಮಂದಿ ಗುಣಮುಖರಾಗಿದ್ದಾರೆ.

1656 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ಹಿಂದಿನ ದಿನಗಳ ಪರೀಕ್ಷಾ ವರದಿಯೂ ಸೇರಿ 1186 ಮಂದಿಯ ವರದಿ ನೆಗೆಟಿವ್ ಬಂದಿದೆ. ಮನೆಗಳಲ್ಲಿ 22 ಸೇರಿ ಒಟ್ಟು 52 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌ನಿಂದ 349 ಜನರು ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಐವರಿಗೆ, ಸಾಗರದಲ್ಲಿ ಇಬ್ಬರಿಗೆ, ಇಲ್ಲಿಗೆ ಬಂದಿದ್ದ ಹೊರ ಜಿಲ್ಲೆಯ ಇಬ್ಬರಿಗೆ ಕೊರೊನಾ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT