ADVERTISEMENT

ಕೊರೊನಾ: ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು

160 ಮಂದಿಗೆ ಕೊರೊನಾ ಸೋಂಕು ದೃಢ, 246 ಮಂದಿ ಗುಣಮುಖ, 5 ಸಾವು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 5:16 IST
Last Updated 28 ಸೆಪ್ಟೆಂಬರ್ 2020, 5:16 IST

ಶಿವಮೊಗ್ಗ:ಜಿಲ್ಲೆಯಲ್ಲಿ ಭಾನುವಾರಕೊರೊನಾ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚಿದ್ದಾರೆ.160 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 246 ಮಂದಿ ಗುಣಮುಖರಾಗಿದ್ದಾರೆ. 5 ಜನ ಮೃತಪಟ್ಟಿದ್ದಾರೆ.

2,038 ಜನರ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದ್ದು, 1,551 ಜನರ ವರದಿ ನೆಗೆಟಿವ್ ಬಂದಿದೆ. ಮನೆಯಲ್ಲಿ 1,206 ಸೇರಿ ಒಟ್ಟು 1,839 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದುವರೆಗೆ ಕೋವಿಡ್‌-19ನಿಂದ ಮೃತಪಟ್ಟವರ ಸಂಖ್ಯೆ 277ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 14,917ಕ್ಕೆ ತಲುಪಿದೆ.

ಶಿವಮೊಗ್ಗ ತಾಲ್ಲೂಕಿನಲ್ಲಿ 67 ಸೋಂಕಿತರು ಪತ್ತೆಯಾಗಿದ್ದಾರೆ. ಭದ್ರಾವತಿಯಲ್ಲಿ 22, ಶಿಕಾರಿಪುರದಲ್ಲಿ 11, ತೀರ್ಥಹಳ್ಳಿಯಲ್ಲಿ 7, ಸೊರಬ 27, ಸಾಗರದಲ್ಲಿ 13, ಹೊಸನಗರದಲ್ಲಿ 8 ಹಾಗೂ ಇತರೆ ಜಿಲ್ಲೆಗಳಿಂದ ಚಿಕಿತ್ಸೆಗೆ ಬಂದಿದ್ದ 5 ಜನರಲ್ಲಿ ಸೋಂಕು ಖಚಿತಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.