ADVERTISEMENT

ಶಿವಮೊಗ್ಗ: ಒಂದೇ ದಿನ 319 ಮಂದಿಗೆ ಕೊರೊನಾ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 5:52 IST
Last Updated 14 ಜನವರಿ 2022, 5:52 IST

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗುರುವಾರ ತ್ರಿಶತಕ ದಾಟಿದ್ದು, 319 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಈ ಪೈಕಿ 171 ಮಂದಿ ಶಿವಮೊಗ್ಗ ತಾಲ್ಲೂಕಿಗೆ ಸೇರಿದ್ದಾರೆ. ಭದ್ರಾವತಿಯ 59, ತೀರ್ಥಹಳ್ಳಿಯ 19, ಶಿಕಾರಿಪುರದ 13, ಸಾಗರದ 37, ಹೊಸನಗರದ 8, ಸೊರಬದ 8 ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಗೆ ಸೋಂಕು ತಗುಲಿದೆ. ಸೋಂಕಿತರ ಪೈಕಿ 144 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 74 ಜನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸಿಎಚ್‌ಸಿಯಲ್ಲಿ 87, ಹೋಮ್ ಐಸೊಲೇಷನ್‌ನಲ್ಲಿ 639, ಟ್ರಯೇಜ್‌ನಲ್ಲಿ35 ಮಂದಿ ಚಿಕಿತ್ಸೆಯಲ್ಲಿದ್ದಾರೆ. 87 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT