ADVERTISEMENT

ಶಿವಮೊಗ್ಗ: 164 ಮಂದಿಗೆ ಕೊರೊನಾ; 275 ಮಂದಿ ಗುಣಮುಖ

14 ಸಾವಿರ ದಾಟಿದ ಕೊರೊನಾ ಸೋಂಕಿತರು, 7 ಸಾವು

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 3:33 IST
Last Updated 24 ಸೆಪ್ಟೆಂಬರ್ 2020, 3:33 IST

ಶಿವಮೊಗ್ಗ:ಜಿಲ್ಲೆಯಲ್ಲಿ ಬುಧವಾರ 164 ಮಂದಿಗೆ ಕೊರೊನಾ ಸೋಂಕು ತಗಲಿದ್ದು, 275 ಮಂದಿ ಗುಣಮುಖರಾಗಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 14 ಸಾವಿರ ದಾಟಿದೆ.

1397 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, 534ಜನರ ವರದಿ ನೆಗೆಟಿವ್ ಬಂದಿದೆ. ಮನೆಯಲ್ಲಿ 1088 ಸೇರಿ ಒಟ್ಟು 1765 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದುವರೆಗೆ ಕೋವಿಡ್‌ನಿಂದ ಜೀವ ಕಳೆದುಕೊಂಡವರ ಸಂಖ್ಯೆ 250ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 14,022ಕ್ಕೆ ತಲುಪಿದೆ.ಶಿವಮೊಗ್ಗ ನಗರದಲ್ಲೇ 88 ಸೋಂಕಿತರು ಪತ್ತೆಯಾಗಿದ್ದಾರೆ. ಭದ್ರಾವತಿಯಲ್ಲಿ 18, ಶಿಕಾರಿಪುರದಲ್ಲಿ 20, ತೀರ್ಥಹಳ್ಳಿಯಲ್ಲಿ9, ಸಾಗರದಲ್ಲಿ 7, ಹೊಸನಗರದಲ್ಲಿ 17 ಹಾಗೂ ಇತರೆ ಜಿಲ್ಲೆಗಳಿಂದ ಚಿಕಿತ್ಸೆಗೆ ಬಂದಿದ್ದ 5 ಜನರಿಗೆ ಸೋಂಕು ಖಚಿತಪಟ್ಟಿದೆ.

7 ಮಂದಿಗೆ ಪಾಸಿಟಿವ್

ADVERTISEMENT

ಸಾಗರ ವರದಿ: ತಾಲ್ಲೂಕಿನಲ್ಲಿ ಬುಧವಾರ 7 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಿರಿವಂತೆ ಗ್ರಾಮದ 48 ಹಾಗೂ 22 ವರ್ಷದ ಪುರುಷ, ಕುಡಿಗೆರೆ ಗ್ರಾಮದ 38 ವರ್ಷದ ಪುರುಷ, ನೇದರವಳ್ಳಿಯ 45 ವರ್ಷದ ಪುರುಷ, ನಗರವ್ಯಾಪ್ತಿಯ ನೆಹರೂ ನಗರದ 38 ವರ್ಷದ ಮಹಿಳೆ, 58 ವರ್ಷದ ಪುರುಷ ಸೋಂಕಿತರಾಗಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.