ADVERTISEMENT

ಶಿವಮೊಗ್ಗದ ಕೋವಿಡ್‌ ಕೇಂದ್ರಗಳಿಗೆ ವೈದ್ಯರು, ಸಿಬ್ಬಂದಿ ನೇಮಕ: ಕೆಎಸ್ ಈಶ್ವರಪ್ಪ

ಸಮಾಲೋಚನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ಮಾಹಿತಿ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 19:30 IST
Last Updated 17 ಆಗಸ್ಟ್ 2020, 19:30 IST
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಸಭಾಂಗಣದಲ್ಲಿ ಸೋಮವಾರ ನಡೆದ ಸಮಾಲೋಚನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಸಭಾಂಗಣದಲ್ಲಿ ಸೋಮವಾರ ನಡೆದ ಸಮಾಲೋಚನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.   

ಶಿವಮೊಗ್ಗ: ಕೋವಿಡ್‌ ಆರೈಕೆ ಕೇಂದ್ರಗಳಿಗೆ ಅಗತ್ಯವಿರುವ‘ಡಿ‘ ಗ್ರೂಪ್, ಶುಶ್ರೂಷಕರು ಹಾಗೂ ವೈದ್ಯ ಅಧಿಕಾರಿಗಳನ್ನುನೇಮಕ ಮಾಡಿಕೊಳ್ಳಲಾಗುವುದು ಎಂದುಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

ಮೆಗ್ಗಾನ್‌ ಆಸ್ಪತ್ರೆ ಸಭಾಂಗಣದಲ್ಲಿಸೋಮವಾರ ನಡೆದಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರುಮಾತನಾಡುತ್ತಿದ್ದರು.

ತಕ್ಷಣ 25 ವೈದ್ಯರು, 50 ಶುಶ್ರೂಷಕರು, 50 ‘ಡಿ’ ದರ್ಜೆ ನೌಕರರನೇಮಕಾತಿಗೆ ಕ್ರಮ ಕೈಗೊಳ್ಳಲುಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ ಎಂದರು.

ADVERTISEMENT

ಜಿಲ್ಲೆಯಲ್ಲಿ ಗಂಟಲು ದ್ರವ ಪರೀಕ್ಷೆ ಗಣನೀಯವಾಗಿ ಹೆಚ್ಚಿಸಲಾಗಿದೆ. ಹಾಗಾಗಿ, ಸೋಂಕಿತರ ಪ್ರಮಾಣದಲ್ಲೂ ಏರಿಕೆಯಾಗಿದೆ. ತಪಾಸಣಾ ಸಂಖ್ಯೆ ಪ್ರತಿ ದಿನಎರಡುಸಾವಿರ ದಾಟಿದೆ. ಈ ಸೋಂಕು ಗರಿಷ್ಠ ಹಂತ ತಲುಪಿದ ನಂತರ ಇಳಿಕೆಯಾಗುವುದು ಎಂದು ತಜ್ಞರು ವರದಿ ನೀಡಿದ್ದಾರೆ.

ಹೊಸದಾಗಿ ವೈದ್ಯಕೀಯ ಪದವಿ ಪೂರೈಸಿದವಿದ್ಯಾರ್ಥಿಗಳುಕಡ್ಡಾಯವಾಗಿ ಸರ್ಕಾರಿಆಸ್ಪತ್ರೆಗಳಲ್ಲಿಸೇವೆ ಸಲ್ಲಿಸಬೇಕು. ಶಿವಮೊಗ್ಗದ ವೈದ್ಯಕೀಯ ಕಾಲೇಜಿನಲ್ಲಿಸೇವೆ ಸಲ್ಲಿಸಲು ಆಸಕ್ತಿ ತೋರುವ ವೈದ್ಯರಿಗೆ ಅವಕಾಶ ನೀಡಲಾಗುವುದು. ಸ್ಥಳೀಯ ಖಾಸಗಿ ಆಸ್ಪತ್ರೆಗಳ ವೈದ್ಯರ ಸೇವೆಯನ್ನೂ ಬಳಸಿಕೊಳ್ಳಲಾಗುವುದು. ಇಂತಹ ವೈದ್ಯರಿಗೆ ಸಂಭಾವನೆ ನಿಗದಿಕುರಿತು ಸಭೆಯಲ್ಲಿ ಚರ್ಚಿಸಿ, ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ಮತ್ತಿತರ ಪರಿಕರಗಳ ಕೊರತೆಇಲ್ಲ. ನಗರದ ಕೆಲವು ಖಾಸಗಿ ಆಸ್ಪತ್ರೆಗಳಲ್ಲೂಸೇವೆದೊರೆಯುತ್ತಿದೆ. ಶಿಕಾರಿಪುರ, ಭದ್ರಾವತಿ ಹಾಗೂ ತೀರ್ಥಹಳ್ಳಿಯಲ್ಲಿಯೂ ಕೋವಿಡ್‌ ಆರೈಕೆ ಕೇಂದ್ರಗಳನ್ನು ತೆರೆಯಲಾಗುವುದು. ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮೆಗ್ಗಾನ್ ಆಸ್ಪತ್ರೆಯ ಆಡಳಿತಾಧಿಕಾರಿ ಸಿದ್ದಪ್ಪ, ಸಲಹಾ ಸಮಿತಿ ಸದಸ್ಯರಾದ ಡಾ.ವಾಣಿಕೋರಿ, ದಿವಾಕರ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಉಪಸ್ಥಿತರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.