ADVERTISEMENT

ಸಿಗರೇಟ್‌ನಲ್ಲಿ ಗಾಂಜಾ: ಆರೋಪಿಗೆ 4 ವರ್ಷ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2019, 15:52 IST
Last Updated 7 ಜನವರಿ 2019, 15:52 IST

ಶಿವಮೊಗ್ಗ: ಸಿಗರೇಟ್‌ನಲ್ಲಿ ಗಾಂಜಾಪುಡಿ ತುಂಬಿ ಮಾರಾಟ ಮಾಡುತ್ತಿದ್ದ ಆರೋಪಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 4 ವರ್ಷ ಕಾರಾಗೃಹ ಶಿಕ್ಷೆ, 10 ಸಾವಿರ ದಂಡವಿಧಿಸಿದೆ.

ಸಾಗರದ ರೋಲ್ಪಿ ಗೋಮ್ಸ್ ಶಿಕ್ಷೆಗೆ ಒಳಗಾದ ಆರೋಪಿ. 2016ರಲ್ಲಿ ಸಾಗರದ ಮದರ್ ಥೆರೇಸಾ ವೃತ್ತದ ಬಳಿ ಮಾರಾಟ ಮಾಡುವಾಗ ಸಾಗರ ನಗರ ಠಾಣೆ ಪೊಲೀಸರು ಬಂಧಿಸಿದ್ದರು.

ವಾದ ಆಲಿಸಿದ ನ್ಯಾಯಧೀಶರಾದ ಪ್ರಭಾವತಿ ಎಂ. ಹಿರೇಮಠ ಅವರು ಶಿಕ್ಷೆ ವಿಧಿಸಿ, ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ವಿ.ಜಿ. ಯಳಗೇರಿ ವಾದ ಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.