ಶಿವಮೊಗ್ಗ: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಐವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಾಲ್ಕು ವರ್ಷಗಳ ಸಾಮಾನ್ಯ ಕಾರಾಗೃಹ ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿ ಆದೇಶಿಸಿದೆ.
2021ರ ಜುಲೈ 8ರಂದು ಲಕ್ಕಿನಕೊಪ್ಪ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್‌ನಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಡಿವೈಎಸ್ಪಿ ಸಿಬ್ಬಂದಿಯೊಂದಿಗೆ ದಾಳಿ ಮಾಡಿ ಬೈಕ್‌ನಲ್ಲಿ ಸಾಗಾಣಿಕೆ ಮಾಡುತ್ತಿದ್ದ 3.38 ಕೆ.ಜಿ ತೂಕದ ಒಣ ಗಾಂಜಾ ವಶಪಡಿಸಿಕೊಂಡು ಆರೋಪಿಗಳಾದ ಎಂ.ಜೀವನ್, ಎಂ.ಸರೋನ, ಕೆ.ಜೀವನ್, ಎಸ್.ನಿತಿನ್ ಅಲಿಯಾಸ್ ಕಡ್ಡಿ, ಎಲ್.ಮುರುಗ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ, ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್, ಆರೋಪ ದೃಢಪಟ್ಟಿದ್ದರಿಂದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಎ.ಎಂ. ಸುರೇಶ್ ಕುಮಾರ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.