ADVERTISEMENT

ವಿದ್ಯಾರ್ಥಿ ಮೇಲೆ ಹಲ್ಲೆ; ನಾಲ್ವರು ಯುವಕರ ಮೇಲೆ ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 4:14 IST
Last Updated 1 ಡಿಸೆಂಬರ್ 2022, 4:14 IST

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10ನೇ ತರಗತಿ ವಿದ್ಯಾರ್ಥಿ ಮೇಲೆ ನಾಲ್ವರು ಯುವಕರು ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ.

ವಿದ್ಯಾರ್ಥಿ ಗಾಳಿಬೈಲ್‌ ಗ್ರಾಮಕ್ಕೆ ಖಾಸಗಿ ಬಸ್‌ನಲ್ಲಿ ತೆರಳುತ್ತಿದ್ದಾಗ ಎರಡು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ವರು ಯುವಕರ ತಂಡ ಕೆತ್ತಲಗುಡ್ಡೆ ವೃತ್ತದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಯನ್ನು ಬಸ್ಸಿನಿಂದ ಕೆಳಗಿಳಿಸಿ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ವಿದ್ಯಾರ್ಥಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.