ಶಿವಮೊಗ್ಗ: ಇಲ್ಲಿನ ಬೊಮ್ಮನಕಟ್ಟೆಯಿಂದ ಬಸವಗಂಗೂರು ಕಡೆ ಹೋಗುವ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಗಿಗುಡ್ಡ ಶಾಂತಿನಗರದ ನಿವಾಸಿ ಸಿ.ಆಕಾಶ ಅಲಿಯಾಸ್ ಮಚ್ಚೆ (20), ದಾವಣಗೆರೆ ಜಿಲ್ಲೆಯ ನ್ಯಾಮತಿಯ ವಿ.ದರ್ಶನ್ (22), ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ನಿವಾಸಿಗಳಾದ ವಿ.ಕೇಶವ (21) ಹಾಗೂ ಎಂ.ನಾಗರಾಜ (21) ಬಂಧಿತ ಆರೋಪಿಗಳು.
ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದು, ವ್ಯಸನಿಗಳಿಗೆ ಮಾರಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ ₹ 20,000 ಮೌಲ್ಯದ 1.25 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಸಿಇಎನ್ ಠಾಣೆ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಎಎಸ್‌ಐ ಶೇಖರ್, ಸಿಬ್ಬಂದಿ ಬಿ.ಧರ್ಮನಾಯ್ಕ, ಬಿ.ರವಿ, ನಾರಾಯಣಸ್ವಾಮಿ, ಫಿರ್ದೋಸ್ ಅಹಮದ್, ಅವಿನಾಶ್, ಪರಮೇಶ್ವರಪ್ಪ ತಂಡ ಕಾರ್ಯಾಚರಣೆ ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.