ADVERTISEMENT

ಎಸ್‌ಐಟಿ ತನಿಖೆ ವಿರುದ್ಧ ಟೀಕೆ, ಟಿಪ್ಪಣಿ ಸಲ್ಲದು: ಪ್ರವೀಣ್‌ ಸೂದ್

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 15:12 IST
Last Updated 6 ಏಪ್ರಿಲ್ 2021, 15:12 IST
 ಪ್ರವೀಣ್ ಸೂದ್
ಪ್ರವೀಣ್ ಸೂದ್   

ಶಿವಮೊಗ್ಗ: ಎಸ್‌ಐಟಿ ಸ್ವತಂತ್ರವಾಗಿ, ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದೆ. ತನಿಖಾ ತಂಡ ಹೇಗೆ ಕೆಲಸ ಮಾಡಬೇಕು ಎನ್ನುವ ಕುರಿತು ಟೀಕೆ, ಟಿಪ್ಪಣಿ ಸಲ್ಲದು. ನ್ಯಾಯಾಲಯ ಮಾಹಿತಿ ಕೇಳಿದೆ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ವರದಿ ನೀಡಿದ ನಂತರ ಸಾರ್ವಜನಿಕ ಚರ್ಚೆ ನಡೆಯಲಿ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದರು.

ಡಿಎಆರ್ ಸಭಾಂಗಣದಲ್ಲಿ ಮಂಗಳವಾರ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ನಂತರ ಅವರು ಮಾತನಾಡಿದರು.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಪೊಲೀಸರು ನಿರ್ವಹಿಸಬೇಕಾದ ಕ್ರಮಗಳ ಕುರಿತು ಚರ್ಚೆಯಾಗಿದೆ. ರಾಜ್ಯದಲ್ಲಿ ಶೇಕಡಾ 80ರಷ್ಟು ಪೊಲೀಸರು ಲಸಿಕೆ ಪಡೆದಿದ್ದಾರೆ. ಉಳಿದವರೂ ಶೀಘ್ರ ಹಾಕಿಸಿಕೊಳ್ಳಲು ಸೂಚಿಸಲಾಗಿದೆ. ಕೊರೊನಾ ಹರಡುವಿಕೆ ತಡೆಯಲು ಜಿಲ್ಲಾಧಿಕಾರಿಗಳ ಜತೆ ಚರ್ಚಿಸಲಾಗುವುದು. ಕೋವಿಡ್ ನಿಯಮಾಳಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಶ್ರಮಿಸಲಾಗುವುದು. ಈಗಾಗಲೇ ಎಲ್ಲ ಪೊಲೀಸ್ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಶಿವಮೊಗ್ಗ ಕಮಿಷನರೇಟ್ ಕಷ್ಟ:ಶಿವಮೊಗ್ಗಕ್ಕೆ ಕಮಿಷನರೇಟ್ ಮಂಜೂರು ಮಾಡಲು ಕನಿಷ್ಠ 10 ಲಕ್ಷ ಜನಸಂಖ್ಯೆ ಇರಬೇಕು. ಈ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಜಿಲ್ಲೆಯಲ್ಲಿ ಕೆಲವು ಸಮಸ್ಯೆಗಳಿವೆ. ಇನ್ನಷ್ಟು ಸಿಬ್ಬಂದಿ ವಸತಿಗೃಹಗಳ ಅಗತ್ಯವಿದೆ. ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಹಲವು ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಹೆಚ್ಚುವರಿ ಇನ್‌ಸ್ಪೆಕ್ಟರ್‌ಗಳನ್ನು ನಿಯೋಜಿಸಲಾಗಿದೆ. ಹಾಗಾಗಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣ ಸುಲಭವಾಗಲಿದೆ. ಬಾಕಿ ಪ್ರಕರಣಗಳನ್ನು ತ್ವರಿತವಾಗಿ ಪೂರೈಸಲು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.