
ಸೊರಬ: ತಾಲ್ಲೂಕಿನ ಹರೀಶಿ ಗ್ರಾಪಂ ವ್ಯಾಪ್ತಿಯ ಹಿರೇ ಕಲಗೋಡು ಹದುಗಿನ ಹಳ್ಳದಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಭಯದ ಆತಂಕ ಮೂಡಿಸಿದೆ.
ಕಳೆದ ಕೆಲವು ದಿನಗಳಿಂದ ಹಳ್ಳದ ನೀರಿನಲ್ಲಿ ಹಾಗೂ ದಡದ ಮೇಲೆ ಮೊಸಳೆ ಕಾಣಿಸಿಕೊಂಡಿದೆ. ಇದನ್ನು ಕಂಡ ಗ್ರಾಮಸ್ಥರು ದಿಗಿಲುಗೊಂಡು ಮೊಸಳೆಯ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು. ಸಾರ್ವಜನಿಕರಲ್ಲಿ ಆತಂಕ ಇಮ್ಮಡಿಗೊಳಿಸಿದೆ.
ಹಿರೇ ಕಲಗೋಡು ಮತ್ತು ಸುತ್ತಮುತ್ತಲಿನ ರೈತರು ತಮ್ಮ ಕೃಷಿ ಕೆಲಸಗಳಿಗೆ ಹಾಗೂ ದನ ಕರುಗಳಿಗೆ ನೀರು ಕುಡಿಸಲು ಇದೇ ಹಳ್ಳವನ್ನು ಅವಲಂಬಿಸಿದ್ದಾರೆ. ಮೊಸಳೆಯ ಭೀತಿಯಿಂದಾಗಿ ರೈತರು ಹಳ್ಳದ ಹತ್ತಿರ ಹೋಗಲು ಭಯಭೀತರಾಗಿದ್ದಾರೆ. ನಮ್ಮ ಪ್ರಾಣಕ್ಕೆ ಹಾಗೂ ಜಾನುವಾರುಗಳಿಗೆ ಅಪಾಯವಾಗುವ ಮುನ್ನ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು. ತಕ್ಷಣ ಕಾರ್ಯಾಚರಣೆ ನಡೆಸಿ ಮೊಸಳೆಯನ್ನು ಸೆರೆಹಿಡಿದು ಬೇರಡೆಗೆ ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.