ADVERTISEMENT

ರಾಜ್ಯ ಸರ್ಕಾರದ ಖಜಾನೆ ಖಾಲಿ; ಸಿ.ಟಿ.ರವಿ ಲೇವಡಿ

-

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 4:17 IST
Last Updated 9 ಜುಲೈ 2025, 4:17 IST

ಶಿವಮೊಗ್ಗ: ‘ಬಾಡಿಗೆ ಹಣ ಪಾವತಿ ಆಗುತ್ತಿಲ್ಲವೆಂದು ಅನ್ನಭಾಗ್ಯದ ಅಕ್ಕಿ ಸಾಗಣೆ ಮಾಡುವ ಲಾರಿಗಳ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ? ಇದು ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿರುವುದರ ಸೈಚಕ’ ಎಂದು ಮಾಜಿ ಸಚಿವ ಸಿ.ಟಿ.ರವಿ ‌ಲೇವಡಿ ಮಾಡಿದರು.

ಅನ್ನಭಾಗ್ಯದಡಿ ಅಕ್ಕಿ ಮೂಟೆ ಹೊರುವ ಕಾರ್ಮಿಕರಿಗೆ ಕೊಡಲೂ ಸರ್ಕಾರದ ಬಳಿ ಹಣ ಇಲ್ಲ. ಸಮಯಕ್ಕೆ ಸರಿಯಾಗಿ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಕೊಡಲು ಆಗುತ್ತಿಲ್ಲ. ಶಾಲೆ ಆರಂಭವಾಗಿ ತಿಂಗಳಾದರೂ ಮಕ್ಕಳಿಗೆ ಶೂ, ಸಾಕ್ಸ್ ಕೊಟ್ಟಿಲ್ಲ. ಇದನ್ನೆಲ್ಲ ಗಮನಿಸಿದರೆ ರಾಜ್ಯದಲ್ಲಿ ಖಜಾನೆ ಖಾಲಿಯಾಗುತ್ತಿಲ್ಲ. ಬದಲಿಗೆ ಲೂಟಿಯಾಗುತ್ತಿದೆ ಅನ್ನಿಸುತ್ತಿದೆ ಎಂದರು.

ಕಾಂಗ್ರೆಸ್ ಪಕ್ಷದ ಒಳಗೂ ಹೋರಾಟ ನಡೆಯುತ್ತಿದೆ. ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ನಾನು ಹೋಗಲ್ಲ ಎಂದು ಸಿದ್ದರಾಮಯ್ಯ ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ADVERTISEMENT

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಪಕ್ಷದೊಳಗೆ ಯಾವುದೇ ಹೋರಾಟ ನಡೆಯುತ್ತಿಲ್ಲ. ಅಧ್ಯಕ್ಷ ಸ್ಥಾನ ಅನ್ನೋದು ಬರೀ ಅಧಿಕಾರವಲ್ಲ. ಅದೊಂದು ಜವಾಬ್ದಾರಿ. ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಸ್ಥಳೀಯವಾಗಿ ಅಭಿಪ್ರಾಯ ಪಡೆದು ತೀರ್ಮಾನಿಸುತ್ತಾರೆ ಎಂದು ಸಿ.ಟಿ.ರವಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.