ಭದ್ರಾವತಿ: ತಾಲ್ಲೂಕು ವನ್ನಿಯರ್ ತಮಿಳು ಗೌಂಡರ್ ಸಮಾಜದ ಮಾಜಿ ಅಧ್ಯಕ್ಷ, ದಲಿತ ಮುಖಂಡ ನೀಲಕಂಠನ್ (62) ಭಾನುವಾರ ರಾತ್ರಿ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ಅವರು ಗಾಂಧಿನಗರದ ಕೇಶವಪುರ ಬಡಾವಣೆಯಲ್ಲಿ ವಾಸವಾಗಿದ್ದರು. ಮನೆ ದೇವರಿಗೆ ಪೂಜೆ ಸಲ್ಲಿಸಲು ತಮಿಳುನಾಡಿಗೆ ತೆರಳಿ ಮರಳುತ್ತಿದ್ದಾಗ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತವಾಗಿದೆ. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
ಮಂಗಳವಾರ ಮಧ್ಯಾಹ್ನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.