ADVERTISEMENT

ತುಮರಿ: ಸಿಡಿಲು ಬಡಿದು ಕಚೇರಿ ಪೀಠೋಪಕರಣಕ್ಕೆ ಹಾನಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2022, 6:47 IST
Last Updated 18 ಏಪ್ರಿಲ್ 2022, 6:47 IST
ತುಮರಿ ಸಮೀಪದ ಕರೂರು ಹೋಬಳಿಯ ಎಸ್.ಎಸ್. ಭೋಗ್ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಸಿಡಿಲು ಬಡಿದು ಗ್ರಾಮ ಪಂಚಾಯಿತಿ ಕಚೇರಿಯ ಪೀಠೋಪಕರಣ ಸುಟ್ಟಿರುವುದು
ತುಮರಿ ಸಮೀಪದ ಕರೂರು ಹೋಬಳಿಯ ಎಸ್.ಎಸ್. ಭೋಗ್ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಸಿಡಿಲು ಬಡಿದು ಗ್ರಾಮ ಪಂಚಾಯಿತಿ ಕಚೇರಿಯ ಪೀಠೋಪಕರಣ ಸುಟ್ಟಿರುವುದು   

ತುಮರಿ:ಸಮೀಪದ ಕರೂರು ಹೋಬಳಿಯ ಎಸ್.ಎಸ್. ಭೋಗ್ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದ ಸಿಡಿಲು ಬಡಿದು ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯ ಪೀಠೋಪಕರಣ, ಕಂಪ್ಯೂಟರ್ ಹಾಗೂ ಇಂಟರ್‌ನೆಟ್ ಕೇಬಲ್‌ಗಳು ಸುಟ್ಟಿವೆ.

ಅವಘಡದ ಸಂದರ್ಭದಲ್ಲಿ ಪಿಡಿಒ ಸೇರಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಮಧ್ಯಾಹ್ನ ಊಟಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೀಠೋಪಕರಣ ಹಾನಿಯಿಂದ ಲಕ್ಷಾಂತರ ನಷ್ಟ ಸಂಭವಿಸಿದೆ. ಸ್ಥಳಕ್ಕೆಪಂಚಾಯಿತಿ ಅಧ್ಯಕ್ಷ ಮಂಜುನಾಥ, ಸದಸ್ಯರು ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT