ಭದ್ರಾವತಿ: ಸ್ಯಾಂಡಲ್‌ವುಡ್ ನಟ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಶನಿವಾರ ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದು, ಅರಣ್ಯ ಇಲಾಖೆ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.
ರಾಜ್ಯ ಅರಣ್ಯ ಇಲಾಖೆ ರಾಯಭಾರಿ ಆಗಿರುವ ದರ್ಶನ್‌ಭಾನುವಾರ ಸಂಜೆಯವರೆಗೆ ಇಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಭದ್ರಾ ಅಭಯಾರಣ್ಯ, ಜಲಾಶಯದ ವೀಕ್ಷಣೆ ಮಾಡಿ ಅಭಯಾರಣ್ಯದ ಹಲವೆಡೆ ಸಂಚರಿಸಿ ವನ್ಯ ಪ್ರಾಣಿಗಳ ಛಾಯಾಚಿತ್ರ ಸೆರೆ ಹಿಡಿಯಲಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
ದರ್ಶನ್ ಜತೆಗೆ ಹಾಸ್ಯ ನಟ ಚಿಕ್ಕಣ್ಣ ಹಾಗೂ ಕೆಲ ಆತ್ಮೀಯರು ಇದ್ದಾರೆ. ಸಾರ್ವಜನಿಕರ ಭೇಟಿಗೆ ಅವಕಾಶ ಕಲ್ಪಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.