ಶಿಕಾರಿಪುರ: ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ದಸರಾ ಕಾವ್ಯ ಸಂಭ್ರಮ ಶನಿವಾರ ಪಟ್ಟಣದಲ್ಲಿ ನಡೆಯಿತು.
ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ನಿಮ್ಮಲ್ಲಿರುವ ಸಾಹಿತ್ಯ ಪ್ರತಿಭೆಯನ್ನು ಪ್ರದರ್ಶಿಸಲು ಕನ್ನಡ ಸಾಹಿತ್ಯ ಪರಿಷತ್ ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮದ ಮೂಲಕ ವೇದಿಕೆ ಕಲ್ಪಿಸಿದೆ’ ಎಂದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ರಘು ಮಾತನಾಡಿ, ‘ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಆಯೋಜಿಸುತ್ತಿದೆ. ಯುವ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ದಸರಾ ಕಾವ್ಯ ಸಂಭ್ರಮ ಆಯೋಜಿಸಿದೆ’ ಎಂದರು.
ಕವಿಗಳು ಕಾವ್ಯ ವಾಚನ ಮಾಡಿದರು. ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.
ಜಾನಪದ ಪರಿಷತ್ ಅಧ್ಯಕ್ಷ ಬಿ. ಪಾಪಯ್ಯ, ಸೆಲೆಬ್ರೇಶನ್ ವರ್ಲ್ಡ್ ಮಾಲೀಕ ವೀರನಗೌಡ, ಉದ್ಯಮಿ ಬಾಳೆಕಾಯಿ ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಮೋಹನ್ ರಾಜ್, ಡಾ.ಪ್ರಕಾಶ್, ಜಿಯಾವುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.