ADVERTISEMENT

ಅತಿವೃಷ್ಟಿ ಪರಿಸ್ಥಿತಿ ನಿರ್ವಹಣೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಕಟ್ಟೆಚ್ಚರ

ಅಧಿಕಾರಿಗಳಿಗೆ ನೂತನ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 14:19 IST
Last Updated 7 ಆಗಸ್ಟ್ 2019, 14:19 IST
ಶಿವಕುಮಾರ್
ಶಿವಕುಮಾರ್   

ಶಿವಮೊಗ್ಗ: ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯ ಪರಿಣಾಮ ಎದುರಿಸಲುದಿನ 24 ತಾಸಿನಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಒ ಜತೆನಡೆಸಿದ ವೀಡಿಯೊಕಾನ್ಫರೆನ್ಸ್ನಲ್ಲಿಅತಿವೃಷ್ಟಿ ಪರಿಸ್ಥಿತಿ ಮಾಹಿತಿ ಪಡೆದರು.ಪರಿಹಾರ ಕಾರ್ಯ ತ್ವರಿತಗತಿಯಲ್ಲಿ ನಡೆಸುವಂತೆ ಸೂಚಿಸಿದರು.

ಪ್ರವಾಹದಿಂದ ಸಂಪರ್ಕ ಕಡಿದುಕೊಂಡಿರುವ ಗ್ರಾಮಗಳಿಗೆ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಒಂದೆರಡು ದಿನಗಳು ಇದೇ ರೀತಿ ಮಳೆಯಾದರೆ ಸಂಪರ್ಕ ಕಡಿದುಕೊಳ್ಳಬಹುದಾದ ಗ್ರಾಮಗಳ ಪಟ್ಟಿ ಸಲ್ಲಿಸಬೇಕು. ನೀರು ತುಂಬಿ ಕೆರೆ ಕಟ್ಟೆ ಒಡೆಯುವ ಸಾಧ್ಯತೆಯಿರುವ ಮಾಹಿತಿ ನೀಡಬೇಕು.ಮುಂಜಾಗರೂಕತಾ ಕ್ರಮ ಜರುಗಿಸಬೇಕು. ಮನೆ, ಆಸ್ತಿಪಾಸ್ತಿ ಹಾನಿ, ಜೀವಹಾನಿ ಹಾಗೂ ಜಾನುವಾರು ಹಾನಿ ಪ್ರಕರಣಗಳಲ್ಲಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಹಾನಿ ಅಂದಾಜು ಮಾಡಬೇಕು.ಒಂದೆರಡು ದಿನಗಳಲ್ಲಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ADVERTISEMENT

ಪ್ರವಾಹ ಪರಿಸ್ಥಿತಿಕುರಿತುನದಿಪಾತ್ರದಲ್ಲಿರುವ ಜನರಿಗೆ ಎಚ್ಚರಿಕೆ ನೀಡಬೇಕು. ಅಗತ್ಯಇರುವ ಭಾಗಗಳಲ್ಲಿ ಜನರನ್ನುಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಅಂತಹ ಕಡೆಗಳಲ್ಲಿ ಗಂಜಿ ಕೇಂದ್ರ ಸ್ಥಾಪನೆಗೆ ಎಲ್ಲಾ ಸಿದ್ಧತೆ ಮಾಡಬೇಕು. ಬೋಟ್‍ಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಬೇಕು. ಹಲವಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯ ಉಂಟಾಗಿದ್ದು, ಅದನ್ನು ಸರಿಪಡಿಸಲು ಯುದ್ಧೋಪಾಧಿಯಲ್ಲಿ ಕೆಲಸ ಮಾಡಬೇಕು. ಮರ ಕಟ್ಟಿಂಗ್ ಮೆಷಿನ್, ಸೇರಿದಂತೆ ಅಗತ್ಯ ಸಾಮಾಗ್ರಿಗಳ ಖರೀದಿ ಕುರಿತು ತಹಶೀಲ್ದಾರ ಮುಖಾಂತರ ಪ್ರಸ್ತಾವ ಸಲ್ಲಿಸಬೇಕು ಎಂದು ಅಗ್ನಿಶಾಮಕಸೇವೆಯಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ತಾಲೂಕುಗಳಲ್ಲೂ ಸಹಾಯವಾಣಿ ಕೇಂದ್ರಆರಂಭಿಸಬೇಕು. ಅಗತ್ಯ ಸಿಬ್ಬಂದಿ ನಿಯೋಜಿಸಬೇಕು. ಪ್ರವಾಹ ಹಾನಿ ಇತ್ಯಾದಿ ಕುರಿತು ಮಾಹಿತಿ ಬಂದ ತಕ್ಷಣ ಸಂಬಂಧಪಟ್ಟವರ ಗಮನಕ್ಕೆ ತಂದು ಕ್ರಮ ಕೈಗೊಳ್ಳಬೇಕು. ಪಂಚಾಯಿತಿಯಲ್ಲಿಎಲ್ಲಾ ಸಿಬ್ಬಂದಿ ಸದಾ ಲಭ್ಯವಿರಬೇಕು ಎಂದು ತಾಕೀತು ಮಾಡಿದರು.

ಎಲ್ಲಾ ಅಧಿಕಾರಿ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿರಬೇಕು.ಕರ್ತವ್ಯ ನಿರ್ವಹಿಸಬೇಕು. ರಜೆಗೆತೆರಳಿದವರು ಕರ್ತವ್ಯಕ್ಕೆ ಹಿಂತಿರುಗಬೇಕು. ಅನಧಿಕೃತವಾಗಿ ರಜೆಯಲ್ಲಿರುವವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹಾನಿ ವಿವರ: ಅತಿವೃಷ್ಟಿಯಿಂದಾಗಿ ಶಿವಮೊಗ್ಗ ತಾಲೂಕಿನಲ್ಲಿ 26 ಮನೆಗಳಿಗೆ ನೀರು ನುಗ್ಗಿದೆ.ಶಿಕಾರಿಪುರದಲ್ಲಿ 32 ಹಾಗೂ ಹೊಸನಗರದಲ್ಲಿ 10 ಮನೆಗಳು ಸೇರಿದಂತೆ 150ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ.ಸಾಗರದಲ್ಲಿ 502 ಹೆಕ್ಟೇರ್ಭತ್ತದ ಗದ್ದೆಗೆ ನೀರು ನುಗ್ಗಿದೆ.386ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ತೀರ್ಥಹಳ್ಳಿಯಲ್ಲಿ 150ಹೆಕ್ಟೇರ್ಗದ್ದೆ ಹಾಗೂ 260 ಹೆಕ್ಟೇರ್ ಅಡಿಕೆ ತೋಟಗಳಿಗೆ ನೀರು ನುಗ್ಗಿದ್ದು ಬೆಳೆ ಹಾನಿ ಸಂಭವಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್,ಹೆಚ್ಚುವರಿಜಿಲ್ಲಾಧಿಕಾರಿ ಜೆ.ಅನುರಾಧ, ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.