ADVERTISEMENT

ವಲಸೆ ಕಾರ್ಮಿಕರಿಗೆ ಹಾಸ್ಟೆಲ್‌ಗಳಲ್ಲಿ ಊಟ, ವಸತಿ

ಜಿಲ್ಲಾಧಿಕಾರಿ ಶಿವಕುಮಾರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 11:20 IST
Last Updated 8 ಏಪ್ರಿಲ್ 2020, 11:20 IST
ಕೆ.ಬಿ.ಶಿವಕುಮಾರ್
ಕೆ.ಬಿ.ಶಿವಕುಮಾರ್   

ಶಿವಮೊಗ್ಗ: ಜಿಲ್ಲೆಯಲ್ಲೇ ಉಳಿದುಕೊಂಡಿರುವ ಎಲ್ಲವಲಸೆ ಕಾರ್ಮಿಕರಿಗೆ ಆಯಾ ತಾಲ್ಲೂಕುಗಳ ಹಾಸ್ಟೆಲ್‍ಗಳಲ್ಲಿ ವಸತಿ, ಊಟಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ತಾಲ್ಲೂಕುಮಟ್ಟದ ಅಧಿಕಾರಿಗಳ ಜತೆ ನಡೆಸಿದ ವೀಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.

ವಲಸೆ ಕಾರ್ಮಿಕರಿಗೆ ನೆರವು ನೀಡಲು ಜಿಲ್ಲಾಮಟ್ಟದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ತಾಲೂಕುಮಟ್ಟದಲ್ಲೂ ನೋಡಲ್ ಅಧಿಕಾರಿಗಳನ್ನು ತಕ್ಷಣ ನೇಮಕ ಮಾಡಬೇಕು. ಯಾರೂ ಹಸಿವಿನಿಂದ ಇರುವ ಕುರಿತು ದೂರುಗಳು ಬಾರದಂತೆ ಎಚ್ಚರಿಕೆ ವಹಿಸಬೇಕು. ನಿರ್ಗತಿಕರಿಗೆ ವಸತಿ, ಊಟಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ತಾಕೀತು ಮಾಡಿದರು.

ADVERTISEMENT

ಪ್ರತಿಯೊಂದು ಗ್ರಾಮ ಪಂಚಾಯಿತಿಗಳಿಗೆ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರತಿದಿನ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಬೇಕು. ನಿತ್ಯವೂ ವರದಿ ಸಲ್ಲಿಸಬೇಕು. ಸಂಘ ಸಂಸ್ಥೆಗಳು, ದಾನಿಗಳಿಗೆ ಪಡಿತರ ಮತ್ತಿತರ ಅಗತ್ಯ ವಸ್ತುಗಳನ್ನು ವಿತರಿಸಲು ಅವಕಾಶ ನೀಡಲಾಗುವುದು. ಅಂಥ ಸಂಸ್ಥೆಗಳುಕಡ್ಡಾಯವಾಗಿ ಸ್ಥಳೀಯ ಆಡಳಿತದಿಂದಅನುಮತಿ ಪಡೆಯಬೇಕುಸ್ಪಷ್ಟಪಡಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿಸಿಇಒಎಂ.ಎಲ್.ವೈಶಾಲಿ, ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.