ADVERTISEMENT

ವಾಯು ಸೇನೆ ನೇಮಕಾತಿ ರ್‍ಯಾಲಿ: ನಾಳೆ ಆರಂಭ

ಪ್ರತಿ ದಿನ 2 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2019, 13:42 IST
Last Updated 15 ಜುಲೈ 2019, 13:42 IST

ಶಿವಮೊಗ್ಗ: ನೆಹರೂ ಕ್ರೀಡಾಂಗಣದಲ್ಲಿ ಜುಲೈ 17ರಿಂದ 22ರವರೆಗೆ ನಡೆಯಲಿರುವ ವಾಯುಸೇನೆಯ ನೇಮಕಾತಿ ರ್‍ಯಾಲಿಗೆ ಸಿದ್ಧತೆ ಪೂರ್ಣಗೊಂಡಿದೆ.

ಪ್ರತಿ ದಿನ 2 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ರಾಜ್ಯದ ಎಲ್ಲಾ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಲು ಅನುಕೂಲವಾಗುವಂತೆ ದಿನ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳಿಗೆ ತಂಗಲು ಸಮುದಾಯ ಭವನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

ಜುಲೈ 17 ಮತ್ತು 18ರಂದು ಭಾರತೀಯ ವಾಯುಸೇನೆಯ ಪೋಲಿಸ್, ಅಟೊಮೊಬೈಲ್, ತಂತ್ರಜ್ಞ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ದಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಧಾರವಾಡ ಮತ್ತು ಉತ್ತರಕನ್ನಡ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಬಹುದು.

ADVERTISEMENT

ಜುಲೈ 21 ಮತ್ತು 22ರಂದು ಬೆಂಗಳೂರು, ರಾಮನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಡಿಕೇರಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಗದಗ, ಕೊಪ್ಪಳ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳ ಅಭ್ಯರ್ಥಿಗಳು ಭಾಗಹಿಸಬಹುದು. ಜುಲೈ 19ಮತ್ತು 20ರಂದು ವೈದ್ಯಕೀಯ ಸಹಾಯಕ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ. ಅಂದು ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳು ಭಾಗಹಿಸಬಹುದು ಎಂದರು.

ಬೇರೆ ಜಿಲ್ಲೆಗಳಿಂದಬರುವಅಭ್ಯರ್ಥಿಗಳಿಗೆ ವಾಸ್ತವ್ಯಕ್ಕಾಗಿ ನ್ಯಾಯಾಲಯ ಸಂಕೀರ್ಣದ ಎದುರಿನ ಒಕ್ಕಲಿಗರ ಸಮುದಾಯ ಭವನ, ರೈಲು ನಿಲ್ದಾಣದ ಬಳಿ ಇರುವ ಕೆಇಬಿ ಸಮುದಾಯ ಭವನದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ನೇಮಕಾತಿ ರ್‍ಯಾಲಿ ನಡೆಯುವ ನೆಹರು ಕ್ರೀಡಾಂಣದ ಬಳಿ ಸಾಕಷ್ಟು ಪ್ರಮಾಣದಲ್ಲಿ ಸಂಚಾರಿ ಟಾಯ್ಲೆಟ್ ಘಟಕ ಇರಿಸಲಾಗುತ್ತಿದೆ. ಬಯಲು ವಿಸರ್ಜನೆಗೆ ಅವಕಾಶ ನೀಡುವುದಿಲ್ಲ. ಕ್ರೀಡಾಂಗಣದ ಒಂದು ಭಾಗದಲ್ಲಿ ಜೆರಾಕ್ಸ್ ಅಂಗಡಿ, ಛಾಯಾಚಿತ್ರ ತೆಗೆಯಿಸಿಕೊಳ್ಳಲು ವ್ಯವಸ್ಥೆ, ಪಾವತಿ ಕ್ಯಾಂಟೀನ್ ವ್ಯವಸ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ನಿಗದಿತ ಶೈಕ್ಷಣಿಕ ಅರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನೇರವಾಗಿ ನೇಮಕಾತಿ ದಿನ ಎಲ್ಲಾ ದಾಖಲೆಗಳೊಂದಿಗೆ ಹಾಜರಾಗಿ ತಮ್ಮ ಹೆಸರು ನೊಂದಾಯಿಸಬಹುದು. ದೈಹಿಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರತಿ ದಿನ ಸುಮಾರು 5ಸಾವಿರ ಅಭ್ಯರ್ಥಿಗಳನ್ನು ಪರೀಕ್ಷಿಸಲು ಬೇಕಾದ ಸಿಬ್ಬಂದಿ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಘಟಕದ ಅಧಿಕಾರಿ ಜೆ.ಪಿ.ಮಿಶ್ರ ಮಾಹಿತಿ ನೀಡಿದರು.

ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎನ್.ಚಂದ್ರಪ್ಪ, ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್ ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.