ADVERTISEMENT

‘ಡಿಸಿಸಿ ಬ್ಯಾಂಕ್ ವಿರುದ್ಧದ ಅಪಪ್ರಚಾರ ಬಿಡಲಿ’

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 3:21 IST
Last Updated 27 ಸೆಪ್ಟೆಂಬರ್ 2020, 3:21 IST

ಹೊಸನಗರ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ವಿರುದ್ಧ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ ದ್ವೇಷದ ರಾಜಕಾರಣ ಮಾಡುವುದನ್ನು ಕೈಬಿಡಬೇಕು ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ವಾಟಗೋಡು ಸುರೇಶ ಒತ್ತಾಯಿಸಿದರು.

ಕೆಪಿಸಿಸಿ ವಕ್ತಾರ ಆಗಿ ರಾಜ್ಯ ಸರ್ಕಾರದ ವೈಫಲ್ಯ ಕುರಿತು ಮಾತನಾಡಬೇಕಾದ ಅವರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಟೀಕೆ ಮಾಡುವುದು ತರವಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ಹಾಗೂ ಜನವಿರೋಧಿ ಕಾಯ್ದೆ ಜಾರಿಗೆ ತರಲು ಹೊರಟಿದೆ. ಬೇರೆ ಕಡೆಗಳಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ಮಾಡುತ್ತಿದ್ದರೆ ಕಿಮ್ಮನೆ ರೈತ ವಿರೋಧಿ ಹೇಳಿಕೆ ಕೊಡುತ್ತಿರುವುದು ಖಂಡನೀಯ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ತೀರ್ಥಹಳ್ಳಿ ತಾಲ್ಲೂಕಿಗೆ ಹೆಚ್ಚಿನ ಸಾಲ ನೀಡಿಲ್ಲ ಎಂಬ ಕಿಮ್ಮನೆ ಹೇಳಿಕೆ ಆಧಾರರಹಿತ ಎಂದರು.

ADVERTISEMENT

ಶಿಮೂಲ್ ನಿರ್ದೇಶಕ ಗುರುಶಕ್ತಿ ವಿದ್ಯಾಧರ, ‘ಸಜ್ಜನ ಎಂಬ ಸೋಗಿನಲ್ಲಿ ಕಿಮ್ಮನೆ ರತ್ನಾಕರ ಅವರು ಡಿಸಿಸಿ ಬ್ಯಾಂಕ್ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಠೇವಣಿದಾರರು ಬ್ಯಾಂಕ್ ಮೇಲೆ ಅನುಮಾನ ಪಡುವಂತೆ ಮಾಡಿದ್ದಾರೆ. ಸುಳ್ಳು ಹೇಳುವುದನ್ನು ಬಿಡಲಿ’ ಎಂದು ಒತ್ತಾಯಿಸಿದರು.

ಪ್ರಮುಖರಾದ ದುಮ್ಮಾ ವಿನಯಕುಮಾರ್, ಹಾಲಗದ್ದೆ ಉಮೇಶ್, ವಿನಾಯಕ ಚಿಕ್ಕಾರು, ಲೇಖನ ಮೂರ್ತಿ, ಲಕ್ಷ್ಮಣ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.