ADVERTISEMENT

ಎಂ.ಬಿ.ಶಿವಣ್ಣ ನಿಧನ

​ಪ್ರಜಾವಾಣಿ ವಾರ್ತೆ
Published 22 ಜೂನ್ 2019, 11:04 IST
Last Updated 22 ಜೂನ್ 2019, 11:04 IST
ಶಿವಣ್ಣ
ಶಿವಣ್ಣ   

ಶಿವಮೊಗ್ಗ: ಜೆಡಿಎಸ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಂ.ಬಿ.ಶಿವಣ್ಣ (80) ಶನಿವಾರ ನಿಧನರಾದರು.

ಶಿವಣ್ಣ ಅವರು ಹಸೂಡಿ ಫಾರಂ ಬಳಿ ಇರುವ ಚಿಕ್ಕಮರಡಿ ಗ್ರಾಮದಲ್ಲಿ ವಾಸಿಸುತ್ತಿದ್ದರು. ಅವರಿಗೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

1997-–98ರಿಂದ 2006–2007ರವರೆಗೆ ಅವರು ಜೆಡಿಎಸ್ ಅಧ್ಯಕ್ಷರಾಗಿದ್ದರು. ಜನತಾ ಪರಿವಾರದ ವರಿಷ್ಠರಾದ ಜೆ.ಎಚ್.ಪಟೇಲ್, ಜಾರ್ಜ್‌ ಫರ್ನಾಂಡಿಸ್, ರಾಮಕೃಷ್ಣ ಹೆಗಡೆ, ಸಿದ್ದರಾಮಯ್ಯ ಅವರ ಜತೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದ ಶಿವಣ್ಣ ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ADVERTISEMENT

ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ:ಜೆಡಿಎಸ್ ಕಚೇರಿಯಲ್ಲಿ ಶನಿವಾರ ಪಕ್ಷದ ಮುಖಂಡರು ಸಭೆ ಸೇರಿ ಸಂತಾಪ ಸೂಚಿಸಿದರು.

ಜಿಲ್ಲಾಘಟಕದ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಮುಖಂಡರಾದ ಡಿ.ಕಾಂತರಾಜ್, ಜಿ.ಡಿ.ಮಂಜುನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.