ADVERTISEMENT

ಎಸ್‌.ಬಂಗಾರಪ್ಪ ಕಂಚಿನ ಪ್ರತಿಮೆ ಸ್ಥಾಪನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2025, 13:59 IST
Last Updated 10 ಮಾರ್ಚ್ 2025, 13:59 IST
ಎಸ್‌.ಬಂಗಾರಪ್ಪ
ಎಸ್‌.ಬಂಗಾರಪ್ಪ   

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ ಪ್ರತಿಮೆಯನ್ನು ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಸ್ಥಾಪಿಸಬೇಕು ಎಂದು ಕೆ.ಪಿ.ಸಿ.ಸಿ. ಸಂಯೋಜಕ ಆರ್.ಮೋಹನ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಅತ್ಯುತ್ತಮ ಆಸ್ಪತ್ರೆಗಳಲ್ಲಿ ಮೆಗ್ಗಾನ್ ಆಸ್ಪತ್ರೆ ಸಹ ಒಂದಾಗಿದೆ. ಇದರಿಂದಾಗಿ ಜಿಲ್ಲೆಯಷ್ಟೇ ಅಲ್ಲ. ಬೇರೆ ಜಿಲ್ಲೆಗಳಿಂದಲೂ ಸಹ ರೋಗಿಗಳು ಚಿಕಿತ್ಸೆ ಪಡೆಯಲು ಇಲ್ಲಿಗೆ ಬರುತ್ತಿದ್ದಾರೆ. ಇಂತಹ ಆಸ್ಪತ್ರೆ ಸ್ಥಾಪನೆಗೆ ಅಡಿಗಲ್ಲು ಹಾಕಿದ ಕೀರ್ತಿ ಬಂಗಾರಪ್ಪನವರಿಗೆ ಸಲ್ಲುತ್ತದೆ. ಆದ್ದರಿಂದ ಈ ಆಸ್ಪತ್ರೆಯ ಆವರಣದಲ್ಲಿ ಅವರ ಪ್ರತಿಮೆ ಸ್ಥಾಪಿಸುವುದು ಸೂಕ್ತವಾಗಿದೆ ಎಂದರು.

ಜಿಲ್ಲೆಯ ಅಭಿವೃದ್ಧಿಯಲ್ಲಿ ಬಂಗಾರಪ್ಪನವರ ಪಾತ್ರ ಮಹತ್ವದ್ದಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಅವರು ಜಾರಿಗೊಳಿಸಿದ ಅಕ್ಷಯ, ಆಶ್ರಯ, ಆರಾಧನಾ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಸಿದ್ದಪ್ಪ, ಯಲವಟ್ಟಿ ವಿಜಯ್ ಕುಮಾರ್, ತಂಗರಾಜ್, ದೇವೇಂದ್ರಪ್ಪ, ಮಹೇಶ್ ಕುಮಾರ್, ರಮೇಶ್, ರಾಮಲು, ರಾಜಣ್ಣ, ಮಣಿಕಂಠ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT