ADVERTISEMENT

ಶಿವಮೊಗ್ಗ: ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಲು ಒತ್ತಾಯ

-

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2025, 7:29 IST
Last Updated 24 ಆಗಸ್ಟ್ 2025, 7:29 IST
<div class="paragraphs"><p>ಮೀಸಲಾತಿ(ಸಾಂಕೇತಿಕ ಚಿತ್ರ)</p></div>

ಮೀಸಲಾತಿ(ಸಾಂಕೇತಿಕ ಚಿತ್ರ)

   

ಶಿವಮೊಗ್ಗ: ‘ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌ ವರದಿಯಂತೆ ಅಲೆಮಾರಿಗಳಿಗೆ ಪ್ರತ್ಯೇಕವಾಗಿ ಶೇ 1ರಷ್ಟು ಮೀಸಲಾತಿ ನೀಡಿದರೆ ಮಾತ್ರ ಸಾಮಾಜಿಕ ನ್ಯಾಯ ಸಿಗುತ್ತದೆ. ಸರ್ಕಾರ ಈ ನಿಟ್ಟಿನಲ್ಲಿ ಯೋಚಿಸಿ ಕ್ರಮ ಕೈಗೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕ ಸಂಚಾಲಕ ಎಂ. ಗುರುಮೂರ್ತಿ ಒತ್ತಾಯಿಸಿದರು.

ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ ತೀರಾ ಹಿಂದುಳಿದ ಅಲೆಮಾರಿ ಸಮುದಾಯಗಳಿಗೆ ಶೇ 1 ಮೀಸಲಾತಿ ಕಲ್ಪಿಸಲಾಗಿತ್ತು. ಆದರೆ ಸರ್ಕಾರವು ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಜಾತಿಯವರೊಂದಿಗೆ ಸೇರಿಸುವ ಮೂಲಕ ಅನ್ಯಾಯ ಮಾಡಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. 

ADVERTISEMENT

‘ಅಲೆಮಾರಿಗಳಲ್ಲಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಜಾತಿಗಳಾದ ಅಂದಾಜು 59 ಜಾತಿಗಳಿಗೆ ಇದರಿಂದ ತೊಂದರೆಯಾಗುತ್ತಿದ್ದು, ಅವರಿಗೆ ಈ ಹಿಂದೆ ಇದ್ದಂತೆ ಶೇ 1ರಷ್ಟು ಮೀಸಲಾತಿಯನ್ನು ಪ್ರತ್ಯೇಕವಾಗಿಯೇ ನೀಡಬೇಕು. ಹಾಗಾಗಿ ಸರ್ಕಾರ ಮತ್ತೊಮ್ಮೆ ತನ್ನ ನಿರ್ಧಾರವನ್ನು ಪರಿಷ್ಕರಣೆ ಮಾಡಿ ಅಲೆಮಾರಿಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು’ ಎಂದರು.

ಮೀಸಲಾತಿಯು ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಾತ್ರ ಸೀಮಿತವಾಗಿದೆ. ಇದು ರಾಜಕೀಯ ಮೀಸಲಾತಿಗೂ ವಿಸ್ತರಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಭದ್ರಾವತಿ ಶಿವಬಸಪ್ಪ ಒತ್ತಾಯಿಸಿದರು.

ಪ್ರಮುಖರಾದ ಎಂ. ಏಳುಕೋಟಿ, ಜೋಗಿ ಚಂದ್ರಪ್ಪ, ರಮೇಶ್ ಚಿಕ್ಕಮರಡಿ, ಬೊಮ್ಮನಕಟ್ಟೆ ಕೃಷ್ಣ, ಬಸವರಾಜ್, ರಾಜಶೇಖರ್, ಹರಿಗೆ ರವಿ, ಗಂಗಮಾಳಮ್ಮ, ಶ್ರೀನಿವಾಸ್, ವೆಂಕಟೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.