ADVERTISEMENT

ಶಿವಮೊಗ್ಗ: ಪೌರತ್ವ ಹೋರಾಟಗಾರರ ಬಿಡುಗಡೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಜನವರಿ 2020, 13:52 IST
Last Updated 13 ಜನವರಿ 2020, 13:52 IST

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆನಡೆಸುತ್ತಿದ್ದಚಂದ್ರಶೇಖರ್ ಅಜಾದ್ ರಾವಣ್ ಅವರನ್ನು ಬಿಡುಗಡೆಮಾಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಪೀಸ್ ಆರ್ಗನೈಜೇಷನ್ ಮಹಿಳಾ ವಿಭಾಗದ ಸದಸ್ಯರುಒತ್ತಾಯಿಸಿದರು.

ಕೇಂದ್ರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಡಿ.21 ರಂದು ದೆಹಲಿಯ ಜಾಮಿಯಾ ಮಸೀದಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭೀಮಸೇನ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ರಾವಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದು ಸಂವಿಧಾನದ ಹಕ್ಕುಗಳ ಉಲ್ಲಂಘನೆಎಂದುಸಂಘಟನೆಯ ಮುಖಂಡರಾದ ಎಹಸಾಸ್ ನಯಾಬ್,ನಾಜೀಮಾ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸುವಾಗಬಂಧಿಸಿದ ಎಲ್ಲ ಭಾರತೀಯರನ್ನೂ ಬಿಡುಗಡೆ ಮಾಡಬೇಕು. ಅವರ ವಿರುದ್ಧ ದಾಖಲಾದ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಜಾತಿ ಮತ್ತು ಧರ್ಮದ ಆಧಾರದ ಮೇಲೆ ರಚಿಸಲಾಗಿದೆ. ಅಲ್ಪಸಂಖ್ಯಾತರನ್ನು ದೇಶದಿಂದ ಒಕ್ಕಲೆಬ್ಬಿಸುವ ಹುನ್ನಾರ ಅಡಗಿದೆ. ಈ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಸಲ್ಮಾ ಯಾಸ್ಮೀನ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.