ತುಮರಿ:ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದಲ್ಲಿ ವಾರಾಂತ್ಯದಲ್ಲಿ ಭಕ್ತರಿಗೆ ದೇವಿ ದರ್ಶನ ಸಂಪೂರ್ಣ ನಿಷೇಧಿಸಲಾಗಿದೆ.
ಸೋಮವಾರದಿಂದ ಶುಕ್ರವಾರದವರೆಗೆ ಕೋವಿಡ್ ಮಾರ್ಗಸೂಚಿ ಅನ್ವಯ ದರ್ಶನಕ್ಕೆ ಅವಕಾಶವಿರುತ್ತದೆ. ಹೊಸ ವರ್ಷದ ನಂತರ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಕೊರೊನಾ ಸೋಂಕು ಹರಡುವ ಭೀತಿ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರದ ಮಾರ್ಗಸೂಚಿ ಅನ್ವಯ ಶನಿವಾರ ಹಾಗೂ ಭಾನುವಾರ ದರ್ಶನದ ಜತೆ ವಸತಿ, ಪ್ರಸಾದ ವಿತರಣೆಯನ್ನೂ ನಿಷೇಧಿಸಲಾಗಿದೆ. ಭಕ್ತರು ಸಹಕರಿಸಬೇಕು ಎಂದುಧರ್ಮಾಧಿಕಾರಿ ಡಾ.ಎಸ್. ರಾಮಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.