ADVERTISEMENT

30ರಂದು ಹಿಂದುಳಿದ ಜಾತಿಗಳ ಒಕ್ಕೂಟದಿಂದ ಧರಣಿ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 6:43 IST
Last Updated 23 ಅಕ್ಟೋಬರ್ 2021, 6:43 IST
ಶಿಕಾರಿಪುರದ ಸುರಭಿ ಭವನದಲ್ಲಿ ಗುರುವಾರ ನಡೆದ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಹಿಂದುಳಿದ ಜಾತಿ ಒಕ್ಕೂಟದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಮಾತನಾಡಿದರು
ಶಿಕಾರಿಪುರದ ಸುರಭಿ ಭವನದಲ್ಲಿ ಗುರುವಾರ ನಡೆದ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಹಿಂದುಳಿದ ಜಾತಿ ಒಕ್ಕೂಟದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಮಾತನಾಡಿದರು   

ಶಿಕಾರಿಪುರ:ಶಿವಮೊಗ್ಗದ ಈದ್ಗಾ ಮೈದಾನದಲ್ಲಿ ಅ.30ರಂದು ಹಿಂದುಳಿದ ಜಾತಿಗಳ ಒಕ್ಕೂಟದ ಆಶ್ರಯದಲ್ಲಿ ನಡೆಯುವ ಧರಣಿ ಸತ್ಯಾಗ್ರಹದಲ್ಲಿ ತಾಲ್ಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ರಾಜ್ಯ ಘಟಕ ಅಧ್ಯಕ್ಷ ರಾಮಚಂದ್ರಪ್ಪ ಮನವಿ ಮಾಡಿದರು.

ಪಟ್ಟಣದ ಸುರಭಿ ಭವನದಲ್ಲಿ ಗುರುವಾರ ನಡೆದ ಹಿಂದುಳಿದ ಜಾತಿ ಒಕ್ಕೂಟದ ಮುಖಂಡರ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಸರ್ಕಾರ ಹಿಂದುಳಿದ ವರ್ಗಗಳ ಜನರಿಗೆ ಸೌಲಭ್ಯವನ್ನು ಒದಗಿಸುವಲ್ಲಿ ಹಿಂದೇಟು ಹಾಕುತ್ತಿದೆ. ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಮುಂದುವರಿದ ಜನಾಂಗಗಳು 2ಎ ಮೀಸಲಾತಿ ಕೇಳುತ್ತಿದ್ದು, ಪ್ರಸ್ತುತವಿರುವ ಸಮುದಾಯಗಳಿಗೆ ಅನ್ಯಾಯವಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಕಾಂತರಾಜ್ ಅರಸು ವರದಿ ಹಿಂದುಳಿದ ವರ್ಗಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಒಳಗೊಂಡಿದೆ. ಈ ವರದಿಯಂತೆ ಸೌಲಭ್ಯಗಳನ್ನು ನೀಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ADVERTISEMENT

‘ಈ ಕ್ಷೇತ್ರದ ಶಾಸಕರು ನಾನು ಜಾತಿ ರಾಜಕಾರಣ ಮಾಡುವುದಿಲ್ಲ ಎಂದು ಹೇಳುತ್ತಾರೆ. ಆದರೆ ಹಿಂದುಳಿದ ಜಾತಿಗೆ ನೀಡುವ ಅನುದಾನದಲ್ಲಿ ತಾರತಮ್ಯ ಮಾಡಿದ್ದಾರೆ’ ಎಂದು ಆರೋಪಿಸಿದರು.

ಹಿಂದುಳಿದ ವರ್ಗಗಳ ಸಂಘಟಿತರಾಗಿ ಹೋರಾಟ ನಡೆಸಬೇಕು. ಅ.30ರಂದು ಶಿವಮೊಗ್ಗದಲ್ಲಿ ನಡೆಯುವ ಹಿಂದುಳಿದ ಜಾತಿಗಳ ಒಕ್ಕೂಟದಿಂದ ನಡೆಯುವ ಧರಣಿ ಸತ್ಯಾಗ್ರಹದಲ್ಲಿ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

ಮುಖಂಡರಾದ ನಗರದ ಮಹಾದೇವಪ್ಪ, ಗೋಪಾಲ್, ಎಂ. ಶ್ರೀಕಾಂತ್, ರಮೇಶ್, ಗೋಣಿ ಮಾಲತೇಶ್, ತಡಗುಣಿ ಮಂಜಪ್ಪ, ಅಶೋಕ್, ಕಬಾಡಿ ರಾಜಪ್ಪ, ಹುಲ್ಮಾರ್ ಮಹೇಶ್, ಎಸ್.ಎಂ. ಶರತ್, ಶ್ರೀನಿವಾಸ್, ಬನ್ನೂರು ಮಂಜಪ್ಪ, ಮಧು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.