ಶಿವಮೊಗ್ಗ: ‘ಧ್ಯಾನಚಂದ್ ಅವರು ವಿಶ್ವ ಮಟ್ಟದಲ್ಲಿ ಹಾಕಿ ತಂಡವನ್ನು ಗುರುತಿಸುವಂತೆ ಮಾಡಿದ ಶ್ರೇಷ್ಠ ಆಟಗಾರ’ ಎಂದು ಆದಿಚುಂಚನಗಿರಿ ಶಾಖಾ ಮಠದ ನಾದಮಯಾನಂದನಾಥ ಸ್ವಾಮೀಜಿ ತಿಳಿಸಿದರು.
ಗುರುಪುರದ ಬಿಜಿಎಸ್ ಶಾಲಾ ಕಾಲೇಜಿನಲ್ಲಿ ಶುಕ್ರವಾರ ಧ್ಯಾನ್ ಚಂದ್ ಅವರ 120ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ದೇಶದ ಕೀರ್ತಿಯನ್ನು ಹೆಚ್ಚಿಸಿದ ಧ್ಯಾನ್ ಚಂದ್ ಅವರು ಒಲಂಪಿಕ್‌ನಲ್ಲಿ ಸಾಲು ಸಾಲು ಚಿನ್ನದ ಪದಕ ತಂದುಕೊಟ್ಟು ದೇಶದ ಕೀರ್ತಿ ಹೆಚ್ಚಿಸಿದ್ದಾರೆ’ ಎಂದರು.
‘ಕ್ರೀಡಾ ರಂಗದ ಬಗ್ಗೆ ಅವಲೋಕನ ಮಾಡುವ ದಿನ ಇದಾಗಿದೆ. ಇತ್ತೀಚೆಗೆ ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರ ಖೇಲ್ ರತ್ನಕ್ಕೆ ಅವರ ಹೆಸರಿಂದ ಕೊಡುತ್ತಿರುವುದು ಹೆಮ್ಮೆಯ ವಿಚಾರ’ ಎಂದರು.
ಸಂಸ್ಥೆಯ ನಿರ್ದೇಶಕ ಕೊಳಿಗೆ ವಾಸಪ್ಪ ಗೌಡ, ಪ್ರಾಚಾರ್ಯ ಸುರೇಶ್, ಚಂದ್ರಿಕಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.