ADVERTISEMENT

ಸಿ.ಟಿ.ರವಿ ಬಂಧನದ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2024, 15:55 IST
Last Updated 25 ಡಿಸೆಂಬರ್ 2024, 15:55 IST
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಶಿವಮೊಗ್ಗ: 'ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಂಧನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡ ಇದೆ. ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದರೆ ಸತ್ಯ ಹೊರಗೆ ಬರಲಿದೆ' ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಬುಧವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಸರ್ಕಾರ ಸಿಐಡಿಗೆ ವಹಿಸಿದ್ದು ಸರಿಯಲ್ಲ. ರವಿ ಅವರನ್ನು ಐದು ಜಿಲ್ಲೆಗಳನ್ನು ಸುತ್ತಿಸಿ ಕರೆದುಕೊಂಡು ಹೋಗಲು ಪೊಲೀಸರಿಗೆ ಅಣತಿ ನೀಡಿದವರು ಯಾರು ಎಂಬುದು ಬಯಲಿಗೆ ಬರಲಿ’ ಎಂದರು.

‘ಸರ್ಕಾರ ಈ ಪ್ರಕರಣವನ್ನು ಯಾಕೆ ಇಷ್ಟು ಎಳೆದಾಡುತ್ತಿದೆ. ಇದರ ಹಿಂದೆ ಯಾರಿದ್ದಾರೆ? ಗೂಂಡಾಗಳನ್ನು ಬಿಟ್ಟು ರವಿ ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದವರು ಯಾರು? ಎಲ್ಲವೂ ಬಯಲಿಗೆ ಬರಬೇಕಾಗಿದೆ. ಅದು ಅದಕ್ಕೆ ನ್ಯಾಯಾಂಗ ತನಿಖೆಗೆ ಸೂಕ್ತ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.