ADVERTISEMENT

ಶಿವಮೊಗ್ಗ| ಹಲ್ಲೆ ಖಂಡಿಸಿ ವೈದ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2019, 17:30 IST
Last Updated 8 ನವೆಂಬರ್ 2019, 17:30 IST
ಶಿವಮೊಗ್ಗದಲ್ಲಿ ಶುಕ್ರವಾರ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಗಳೂರಿನ ವಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯರ ಮೇಲೆ ನಡೆದ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಶುಕ್ರವಾರ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಗಳೂರಿನ ವಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯರ ಮೇಲೆ ನಡೆದ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ:ಬೆಂಗಳೂರಿನ ವಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯರ ಮೇಲೆ ನಡೆದ ಹಲ್ಲೆ ಖಂಡಿಸಿ ಶುಕ್ರವಾರ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿಖಾಸಗಿ ಆಸ್ಪತ್ರೆಗಳುಬೆಳಗ್ಗೆ 6ರಿಂದ ನ.9ರ ಬೆಳಿಗ್ಗೆ6ರವರೆಗೆಜಿಲ್ಲೆಯ 668 ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

10 ವರ್ಷಗಳಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಸಾಕಷ್ಟು ಹಲ್ಲೆಗಳು ನಡೆದಿವೆ. ಇಂತಹ ಘಟನೆಯಿಂದ ವೈದ್ಯರು ಮಾನಸಿಕವಾಗಿ ಕುಸಿದು ಹೋಗುತ್ತಾರೆ. ಭಯದ ವಾತಾವರಣ ನಿರ್ಮಾಣವಾಗಿದೆ. ವೈದ್ಯರುಭೀತಿರಹಿತವಾಗಿಕೆಲಸ ಮಾಡುವ ವಾತಾವರಣ ನಿರ್ಮಿಸಬೇಕು.ಸೂಕ್ತ ರಕ್ಷಣೆ ಒದಗಿಸಬೇಕು. ವೈದ್ಯರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಆರೋಪಿಗಳಿಗೆಕಠಿಣ ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಬೇಕು ಎಂದುಒತ್ತಾಯಿಸಿದರು.

ಹಲ್ಲೆ ನಡೆಸಿದ ಕರವೇ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದುಎಂದು ಎಚ್ಚರಿಸಿದರು. ಐಎಂಎ ಕಚೇರಿಯಿಂದಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ADVERTISEMENT

ಐಎಂಎ ಅಧ್ಯಕ್ಷ ಡಾ.ಪರಮೇಶ್ವರ್, ಕಾರ್ಯದರ್ಶಿಡಾ.ಶಂಭುಲಿಂಗ, ಡಾ.ನಾಗರಾಜ್, ಡಾ.ನಂದಾಕಿಶೋರ್, ಡಾ.ಅನಸೂಯ ರಾಯ್ಕರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.