ADVERTISEMENT

ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ನಿಲ್ಲಿಸಬೇಡಿ

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮನವಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 4:46 IST
Last Updated 6 ಡಿಸೆಂಬರ್ 2022, 4:46 IST

ಶಿವಮೊಗ್ಗ: ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮುಂದುವರಿಸಲು ಮಧ್ಯಸ್ಥಿಕೆ ವಹಿಸುವಂತೆ ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯ ಸದಸ್ಯರು ಜಿಲ್ಲಾಡಳಿತದ ಮೂಲಕ ಸೋಮವಾರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‌ನ ಮೆಟ್ರಿಕ್‌ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಬರುವ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಕೊಡಮಾಡುತ್ತಿದ್ದ ವಿದ್ಯಾರ್ಥಿವೇತನವನ್ನು ಈ ವರ್ಷದಿಂದ ರದ್ದುಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಈ ನಡೆಯ ಬಗ್ಗೆ ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದೆ.

ಈ ವಿದ್ಯಾರ್ಥಿಗಳು ಆರ್‌ಟಿಐ ಅಡಿಯಲ್ಲಿ ಬರುವ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುತ್ತಿದೆ. ಅವರಿಗೆ ಸ್ಕಾಲರ್‌ಶಿಪ್‌ನ ಅಗತ್ಯ ಬೀಳುವುದಿಲ್ಲವೆಂದು ಈ ನಿರ್ಧಾರ ಕೈಗೊಂಡಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದು ಆರ್‌ಟಿಐ ಕಾಯ್ದೆಯ ತಪ್ಪು ವ್ಯಾಖ್ಯಾನ ಆಗಿದ್ದು, ಮೂಲಭೂತ ಹಕ್ಕು ಆದ ಆರ್‌ಟಿಐ ಕಾಯ್ದೆ ಅನುಷ್ಠಾನಗೊಳಿಸಲು ಸಹಕಾರಿಯಾಗುವ ಸ್ಕಾಲರ್‌ಶಿಪ್ ಅನ್ನು ಹೆಚ್ಚುವರಿ ಸವಲತ್ತು ಎಂಬಂತೆ ಬಿಂಬಿಸುವುದು ತಪ್ಪಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ADVERTISEMENT

ಈ ಸಂದರ್ಭದಲ್ಲಿ ಸಮಿತಿ ಪ್ರಮುಖರಾದ ಮುಜಮ್ಮಿಲ್ ಅನ್ವರ್, ಆಯೆಷಾ ಎಜಾಜ್, ಇಕ್ಬಾಲ್ ಅಹ್ಮದ್, ಉಬೇದುಲ್ಲಾ ಸೇರಿದಂತೆ ಹಲವರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.