ADVERTISEMENT

ಡ್ರಗ್ಸ್ ಪ್ರಕರಣ: ನಿಷ್ಟಕ್ಷಪಾತ ತನಿಖೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 12:25 IST
Last Updated 16 ಸೆಪ್ಟೆಂಬರ್ 2020, 12:25 IST
ಡ್ರಗ್ಸ್ ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆ ಮಾಡಬೇಕು ‌ಎಂದು ಆಗ್ರಹಿಸಿ ಬುಧವಾರ ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆಯಿಂದ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು
ಡ್ರಗ್ಸ್ ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆ ಮಾಡಬೇಕು ‌ಎಂದು ಆಗ್ರಹಿಸಿ ಬುಧವಾರ ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆಯಿಂದ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು   

ಶಿವಮೊಗ್ಗ: ಡ್ರಗ್ಸ್ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆಮಾಡಬೇಕು ಎಂದು ಆಗ್ರಹಿಸಿ ಬುಧವಾರ ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮಾದಕ ವಸ್ತುಗಳ ಸೇವನೆ, ಸಾಗಣೆ ಮತ್ತು ಪೂರೈಕೆಯ ನೂರಾರು ಪ್ರಕರಣಗಳ ವರದಿಯಾಗುತ್ತಿದ್ದು, ದೊಡ್ಡ ಪ್ರಮಾಣದಲ್ಲಿಯೇ ಸಮಾಜಕ್ಕೆ ಡ್ರಗ್ಸ್ ಪೂರೈಕೆಯಾಗುತ್ತಿರುವುದು ಕಳವಳಕಾರಿ. ಡ್ರಗ್ಸ್ ಜಾಲದಿಂದ ಸಮಾಜವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.

ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಯುವ ಜನರಲ್ಲಿ ಜಾಗೃತಿ ಮೂಡಿಸುವ ಮತ್ತು ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಕರಾಳಹಸ್ತ ಚಾಚದಂತೆ ಎಚ್ಚರ ವಹಿಸಬೇಕು. ಸಿನೆಮಾ ಮತ್ತು ಸಾಂಸ್ಕೃತಿಕ ರಂಗದಲ್ಲಿ ಮಾದಕ ವಸ್ತುಗಳ ಜಾಲದೊಂದಿಗೆ ನಂಟು ಹೊಂದಿರುವವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.