ADVERTISEMENT

ಎಲ್ಲರಿಗೂ ಹಾಸ್ಟೆಲ್‌ ಸೌಲಭ್ಯಕ್ಕೆ ಸಂಸದ ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಜುಲೈ 2019, 14:08 IST
Last Updated 15 ಜುಲೈ 2019, 14:08 IST
ಎಂ.ಗುರುಮೂರ್ತಿ
ಎಂ.ಗುರುಮೂರ್ತಿ   

ಶಿವಮೊಗ್ಗ: ಅರ್ಜಿ ಸಲ್ಲಿಸಿದ ಪರಿಶಿಷ್ಟ ಜಾತಿ, ವರ್ಗದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ 2013ರಲ್ಲಿ ಹೊರಡಿಸಿದ್ದ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಖಂಡಿಸಿದೆ.

ಅಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ, ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಿದ್ದರು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಲಭ್ಯವಿರುವ ಮೆಟ್ರಿಕ್ ನಂತರ ಹಾಸ್ಟೆಲ್‌ಗಳಲ್ಲಿ ಸೀಟು ಭರ್ತಿಯಾದ ನಂತರ ಉಳಿದ ವಿದ್ಯಾರ್ಥಿಗಳಿಗೆ ಬಾಡಿಗೆ ಕಟ್ಟಡ ಪಡೆದು ಊಟ ಮತ್ತು ವಸತಿ ಕಲ್ಪಿಸುವಂತೆ ಆದೇಶಿಸಿದ್ದರು. ಇದರಿಂದ ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿತ್ತು.

ಈ ಸುತ್ತೋಲೆ ಹಿಂಪಡೆದಿರುವ ರಾಜ್ಯದ ಸಮ್ಮಿಶ್ರ ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಹಾಸ್ಟೆಲ್‌ ಮಂಜೂರಾಗೆ ಅನುಗುಣುವಾಗಿ ಸೀಟು ಭರ್ತಿ ಮಾಡುವಂತೆ ಸೂಚಿಸಿದೆ. ಇದರ ಪರಿಣಾಮ ಪರಿಶಿಷ್ಟ ಜಾತಿ, ವರ್ಗದ ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ವಂಚಿತರಾಗಿದ್ದಾರೆ ಎಂದು ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಕುರಿತು ‘ಪ್ರಜಾವಾಣಿ’ ಜುಲೈ 14ಎ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿ, ಕಣ್ಣು ತೆರೆಸಿದೆ. ವಿದ್ಯಾರ್ಥಿಗಳಿಗೆ ಮಾರಾಕವಾಗಿರುವ ಆದೇಶ ತಕ್ಷಣವೇ ಹಿಂಪಡೆದು 2013–14ನೇ ಸಾಲಿನ ಸುತ್ತೋಲೆ ಮುಂದುವರಿಸಬೇಕು. ಹಾಸ್ಟೆಲ್ ಸೌಲಭ್ಯ ಬಯಸಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು. ಒಂದು ವೇಳೆ ಸರ್ಕಾರ ಈ ಆದೇಶ ಹಿಂಪಡೆಯದಿದ್ದರೆ ರಾಜ್ಯದ ಎಲ್ಲೆಡೆ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.