ಸಾಗರ: ಇಲ್ಲಿನ ಇಕ್ಕೇರಿ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯ ಟಿಪ್‌ಟಾಪ್ ಬಶೀರ್ ಅವರ ನಿವಾಸದ ಮೇಲೆ ಶನಿವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ದಾಳಿ ನಡೆಸಿದ್ದಾರೆ.
ಉದ್ಯಮಿ ಬಶೀರ್ ಅವರಿಗೆ ಸೇರಿದ ಆಸ್ತಿ, ಬ್ಯಾಂಕ್ ಖಾತೆಯ ವಿವರಗಳನ್ನು 9 ಅಧಿಕಾರಿಗಳ ತಂಡ ಪರಿಶೀಲಿಸಿದೆ.
'ಈ ಹಿಂದೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿಯ ಹಿನ್ನೆಲೆಯಲ್ಲಿ ಇಂದು ಇಡಿ ಅಧಿಕಾರಿಗಳು ಬಂದಿದ್ದರು. ಅವರು ಕೇಳಿದ ಎಲ್ಲಾ ಮಾಹಿತಿ, ದಾಖಲೆಗಳನ್ನು ಒದಗಿಸಲಾಗಿದೆ. ಬುಧವಾರ ಮಂಗಳೂರಿನಲ್ಲಿರುವ ಇ.ಡಿ ಕಚೇರಿಗೆ ಬರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ' ಎಂದು ಬಶೀರ್ 'ಪ್ರಜಾವಾಣಿ' ಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.