ಶಿವಮೊಗ್ಗ: ನಿರಂತರ ಮಳೆಗೆ ತಾಲ್ಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಅಡಗಡಿ ಗ್ರಾಮದಲ್ಲಿ ಮನೆ ಕುಸಿದು ಒಳಗೆ ಮಲಗಿದ್ದ ಶತಾಯುಷಿ ವೃದ್ಧೆಯೊಬ್ಬರು ಸೋಮವಾರ ನಸುಕಿನಲ್ಲಿ ಸಾವಿಗೀಡಾಗಿದ್ದಾರೆ.
ಅಡಗಡಿ ಗ್ರಾಮದ ಕೂಲಿ ಕಾರ್ಮಿಕ ಮಹಿಳೆ ಹೇಮಾವತಿ ಅವರ ಮನೆ ಕುಸಿದಿದೆ. ಮನೆಯಲ್ಲಿದ್ದ ಸಂಬಂಧಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಕಂಕೋವ ಗ್ರಾಮದ ಸಿದ್ದಮ್ಮ (100) ಮಣ್ಣಿನಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮನೆಯಲ್ಲಿ ಮಲಗಿದ್ದ ಹೇಮಾವತಿ ಹಾಗೂ ಅವ ಪುತ್ರಿ ಪಲ್ಲವಿ, ಅಳಿಯ ಪರಶುರಾಮ್ ಹಾಗೂ ಎರಡು ವರ್ಷದ ಮಗು ಚೇತನ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ಬಗ್ಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.