ADVERTISEMENT

ವಿದ್ಯುತ್ ಶಾಕ್: ಲೈನ್‌ಮನ್‌‌ ಸಾವು

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 5:24 IST
Last Updated 15 ಅಕ್ಟೋಬರ್ 2020, 5:24 IST

ಶಿವಮೊಗ್ಗ: ಈಚಿಗೆ ಕುವೆಂಪು ರಸ್ತೆಯಲ್ಲಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದು ತೀವ್ರ ಗಾಯಗೊಂಡಿದ್ದ ಲೈನ್‌ಮನ್ ಉಮಾ ಶಂಕರ್ (42) ಬುಧವಾರ ಮೃತಪಟ್ಟಿದ್ದಾರೆ.

ಅ.8ರಂದು ಕುವೆಂಪು ರಸ್ತೆಯಲ್ಲಿ ಮೆಗ್ಗಾನ್ ಆಸ್ಪತ್ರೆಯ ವಿದ್ಯುತ್ ಲೈನ್‍ನಲ್ಲಿ ದುರಸ್ತಿ ಕೆಲಸ ಮಾಡುತ್ತಿದ್ದ ವೇಳೆ ಉಮಾಶಂಕರ್‌ಗೆ ವಿದ್ಯುತ್ ಶಾಕ್ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾರೆ. ಅವರಿಗೆಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT