ADVERTISEMENT

ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡುವುದು ತಪ್ಪಲ್ಲ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2019, 3:43 IST
Last Updated 8 ಡಿಸೆಂಬರ್ 2019, 3:43 IST
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಸಾಗರ: ‘ಅತ್ಯಾಚಾರ ಮಾಡಿ ಹತ್ಯೆ ಎಸಗಿದಂತಹ ಘೋರ ಅಪರಾಧಗಳಲ್ಲಿ ಭಾಗಿಯಾದವರನ್ನು ಎನ್‌ಕೌಂಟರ್ ಮಾಡುವುದು ತಪ್ಪಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ತಾಯಿ, ತಂಗಿ ಇದ್ದ ಯಾರೂ ಎನ್‌ಕೌಂಟರ್ ಮಾಡಿದ್ದು ತಪ್ಪು ಎಂದು ಹೇಳುವುದಿಲ್ಲ. ಈ ಹಿಂದೆ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದ ಪ್ರಕರಣದ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ್ದೆ. ಆಗ ಮುಖ್ಯಮಂತ್ರಿಯಾಗಿದ್ದವರು ಅಹಂಕಾರದಿಂದ ಇದಕ್ಕೆ ಪ್ರತಿಕ್ರಿಯಿಸಿದ್ದ ಪರಿಣಾಮ ಈಗ ಅವರಿಗೆ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ’ ಎಂದು ಸಿದ್ದರಾಮಯ್ಯ ಅವರ ಹೆಸರು ಹೇಳದೇ ಟೀಕಿಸಿದರು.

ಸಂವಿಧಾನ, ಕಾನೂನು ಎಲ್ಲವೂ ಆಯಾ ಕಾಲಕ್ಕೆ ತಕ್ಕಂತೆ ಬದಲಾಗುತ್ತಲೇ ಇರುತ್ತವೆ. 12 ವರ್ಷದೊಳಗಿನವರ ಮೇಲೆ ಅತ್ಯಾಚಾರ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ತರಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಎಲ್ಲ ರೀತಿಯ ಅತ್ಯಾಚಾರ ಪ್ರಕರಣಗಳಿಗೂ ಈ ಕಾನೂನು ಅನ್ವಯವಾಗಬೇಕು ಎಂದು ಅಭಿಪ್ರಾಯಪಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.