ADVERTISEMENT

ಸಾಗರ: ‘ಪರಿಸರ ಸ್ನೇಹಿ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರೋತ್ಸಾಹ ಅಗತ್ಯ’

​ಪ್ರಜಾವಾಣಿ ವಾರ್ತೆ
Published 21 ಮೇ 2025, 14:28 IST
Last Updated 21 ಮೇ 2025, 14:28 IST
ಸಾಗರದ ಹವ್ಯಕ ಅಭಿವೃದ್ಧಿ ಪ್ರತಿಷ್ಠಾನದ ಮಹಿಳಾ ವಸತಿ ನಿಲಯದಲ್ಲಿ ಈಚೆಗೆ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರನ್ನು ಗೌರವಿಸಲಾಯಿತು.
ಸಾಗರದ ಹವ್ಯಕ ಅಭಿವೃದ್ಧಿ ಪ್ರತಿಷ್ಠಾನದ ಮಹಿಳಾ ವಸತಿ ನಿಲಯದಲ್ಲಿ ಈಚೆಗೆ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರನ್ನು ಗೌರವಿಸಲಾಯಿತು.   

ಸಾಗರ: ಪ್ರವಾಸೋದ್ಯಮವೆಂದರೆ ಕೇವಲ ಮೋಜು, ಮಸ್ತಿ ಮಾತ್ರವಲ್ಲ. ಪರಿಸರಕ್ಕೆ ಪೂರಕವಾಗಿಯೂ ಪ್ರವಾಸೋದ್ಯಮವನ್ನು ಬೆಳೆಸಲು ಸಾಧ್ಯವಿದೆ’ ಎಂದು ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೇಳಿದರು.

ಇಲ್ಲಿನ ಹವ್ಯಕ ಅಭಿವೃದ್ಧಿ ಪ್ರತಿಷ್ಠಾನದ ಮಹಿಳಾ ವಸತಿ ನಿಲಯದಲ್ಲಿ ಈಚೆಗೆ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪರಿಸರ ಸ್ನೇಹಿ ಪ್ರವಾಸೋದ್ಯಮದ ಬೆಳವಣಿಗೆಗೆ ಪ್ರೋತ್ಸಾಹ ದೊರಕಬೇಕಿದೆ’ ಎಂದರು.

‘ಮಲೆನಾಡು ಭಾಗಕ್ಕೆ ಪ್ರವಾಸಕ್ಕೆಂದು ಬರುವ ಕೆಲವರು ಕಂಡ ಕಂಡಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಎಸೆಯುತ್ತಿರುವುದು ಬೇಸರದ ಸಂಗತಿಯಾಗಿದೆ. ಪರಿಸರವನ್ನು ಸಂರಕ್ಷಿಸಲು ನಮ್ಮಿಂದಾಗುವ ಸಣ್ಣಪುಟ್ಟ ಕೆಲಸಗಳನ್ನು ನಾವು ಮಾಡಲೇಬೇಕಿದೆ’ ಎಂದು ಕಿವಿಮಾತು ಹೇಳಿದರು.

ADVERTISEMENT

ಪ್ರಮುಖರಾದ ಕೆ.ಎಸ್.ಸುಬ್ರಾವ್, ಎಂ.ಜಿ.ಪ್ರಕಾಶ್ ಭಟ್, ಅಶ್ವಿನಿಕುಮಾರ್, ಅಬಸೆ ದಿನೇಶ್ ಕುಮಾರ್ ಜೋಷಿ, ಉಮೇಶ್ ಎಚ್.ಎನ್. ಪಿ.ಎನ್.ನಾಗರಾಜ್, ಲಕ್ಷ್ಮಿನಾರಾಯಣ, ವೆಂಕಟೇಶ್ ಕವಲಕೋಡು, ಅರುಣ್ ಕುಂಟಗೋಡು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.