
ಹೊಸನಗರ: ‘ಭಾರತ ದೇಶದ ಸ್ವತಂತ್ರ ಆಡಳಿತದ ಪರಿಕಲ್ಪನೆಯ ಗಣ ಒಕ್ಕೂಟದ ವ್ಯವಸ್ಥೆ ವಿಶ್ವಕ್ಕೆ ಮಾದರಿಯಾಗಿದೆ’ ಎಂದು ತಹಶೀಲ್ದಾರ್ ಭರತ್‌ರಾಜ್ ಹೇಳಿದರು.
ಇಲ್ಲಿನ ನೆಹರು ಮೈದಾನದಲ್ಲಿ 77ನೇ ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
‘ಹಲವು ಭಾಷೆ ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ ನಮ್ಮದಾಗಿದೆ. ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಪ್ರಬುದ್ಧ, ಸದೃಢ ರಾಷ್ಟ್ರವಾಗಿ ಭಾರತ ಬೆಳೆದು ನಿಂತಿದೆ. ಸಾರ್ವಭೌಮತ್ವವನ್ನು ಕಾಪಾಡುವ ಗುರುತರ ಜವಾಬ್ದಾರಿ ದೇಶದ ಪ್ರತಿಯೊಬ್ಬರ ಮೇಲಿದೆ’ ಎಂದರು.
ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ವೃತ್ತ ನಿರೀಕ್ಷಕ ಗೌಡಪ್ಪ ಗೌಡರ್, ಪಿಎಸ್ಐ ಶಂಕರಗೌಡ ಪಾಟೀಲ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎನ್. ಹರೀಶ್, ಕ್ಷೇತ್ರ ಶಿಕ್ಷಣಾದಿಕಾರಿ ವೈ. ಗಣೇಶ್, ನಾಡ ಹಬ್ಬಗಳ ಆಚರಣಾ ಸಮಿತಿಯ ಸದಸ್ಯರಾದ ಶ್ರೀನಿವಾಸ್ ಕಾಮತ್, ಶ್ರೀಧರ ಉಡುಪ, ವಿಜೇಂದ್ರ ಶೇಟ್, ದೈಹಿಕ ಪರಿವೀಕ್ಷಕ ವಿನಯ್ ಹೆಗಡೆ ಕರ್ಕಿ, ಶಿಶು ಅಭಿವೃದ್ಧಿ ಅಧಿಕಾರಿ ಗಾಯಿತ್ರಿ, ಚಿರಾಗ್, ಸುದೀಂದ್ರ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜುಶೆಟ್ಟಿ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.