ADVERTISEMENT

ಶುಲ್ಕ ಮರುಪಾವತಿ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

-

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 4:55 IST
Last Updated 25 ಫೆಬ್ರುವರಿ 2026, 4:55 IST
   

ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ. 

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾರ್ಚ್‌ 5ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತರು https://ssp.postmatric. karnataka.gov.in ಮೂಲಕ ಮಾ.5 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಮೊ.ಸಂ. 8050770004, ತಂತ್ರಾಂಶ ಸಹಾಯವಾಣಿ 1902 ಸಂಪರ್ಕಿಸಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.