ಬಂಧನ
(ಪ್ರಾತಿನಿಧಿಕ ಚಿತ್ರ)
ಸಾಗರ: ಸಾಲ ಪಡೆದ ವ್ಯಕ್ತಿಗೆ ಅಧಿಕ ಬಡ್ಡಿ ನೀಡುವಂತೆ ಕಿರುಕುಳ ನೀಡಿ, ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬಾತನನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ರವಿ ಭಟ್ಟ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಮೇ 19ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.