ADVERTISEMENT

ಹಿಜಾಬ್‌ಗೆ ಆಗ್ರಹಿಸಿ ಪ್ರತಿಭಟನೆ: 9 ಜನರ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2022, 14:12 IST
Last Updated 17 ಫೆಬ್ರುವರಿ 2022, 14:12 IST
   

ಶಿವಮೊಗ್ಗ/ಶಿರಾಳಕೊಪ್ಪ: ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ 9 ಜನರ ವಿರುದ್ಧ ಶಿರಾಳಕೊಪ್ಪ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ ಎಂಬವ ಆರೋಪದ ಮೇಲೆ ಪುರಸಭೆ ಸದಸ್ಯರಾದ ಮುದಾಸೀರ್, ಸಾಧಿಕ್‌, ಶಿರಾಳಕೊಪ್ಪ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಬಿಲಾಲ್ ಸೇರಿದಂತೆ 9 ಜನರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿವಿಧ ಶಾಲೆಯ ವಿದ್ಯಾರ್ಥಿನಿಯರು ಗುರುವಾರವೂ ಪ್ರತಿಭಟನೆ ಮುಂದುವರಿಸಿದರು. ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯು, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಶಿಕ್ಷಕರು ವಿದ್ಯಾರ್ಥಿನಿಯರ ಮನವಲಿಸಿ ತರಗತಿಗೆ ಕರೆದುಕೊಂಡು ಹೋದರು.

ADVERTISEMENT

ತಡಗಣಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕರ್ನಾಟಕ ಪಬ್ಲಿಕ್‌ ಶಾಲೆಯ ಪಿಯು ದ್ಯಾರ್ಥಿನಿಯರು ಮದ್ಯಾಹ್ನದವರೆಗೂ ಪ್ರತಿಭಟನೆ ಮುಂದುವರಿಸಿದರು.

ಶಿವಮೊಗ್ಗ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು ಹಿಜಾಬ್‌ ಇಲ್ಲದೆ ಕಾಲೇಜಿನ ಒಳಗೆ ಪ್ರವೇಶ ನೀಡದ ಕಾರಣ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ನ್ಯಾಯಾಲಯ ತೀರ್ಪು ಬರುವವರೆಗೂ ಹಿಜಾಬ್‌ಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿನಿಯರ ಪರವಾಗಿ ನಿಂತ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಗೆ ಕೈ ಜೋಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.