ಭದ್ರಾವತಿ: ಅರಣ್ಯದಲ್ಲಿ ಬೆಂಕಿ ಅವಘಡಗಳು ಸಂಭವಿಸಿದ ತುರ್ತು ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿ ಮೊದಲು ಬೆಂಕಿ ನಂದಿಸಲು ಆದ್ಯತೆ ನೀಡಬೇಕು ಎಂದು ಚನ್ನಗಿರಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ.ಎ.ರತ್ನಪ್ರಭಾ ಹೇಳಿದರು.
ಶನಿವಾರ ನಗರದ ನ್ಯೂಟೌನ್ ಜೆ.ಟಿ.ಎಸ್ ಶಾಲೆ ಸಮೀಪದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಘಟಕದಿಂದ ಹಮ್ಮಿಕೊಂಡಿದ್ದ ಬೆಂಕಿಯಿಂದ ಅರಣ್ಯ ರಕ್ಷಿಸುವ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಗ್ನಿಶಾಮಕ ಠಾಣಾಧಿಕಾರಿ ವಸಂತಕುಮಾರ್ ಮಾತನಾಡಿ, ‘ಬೆಂಕಿ ನಂದಿಸಲು ಹಲವಾರು ಕ್ರಮಗಳಿವೆ ಆಯಾ ಸಂದರ್ಭಗಳಿಗೆ ತಕ್ಕಂತೆ ಅವುಗಳನ್ನು ಸರಿಯಾದ ರೀತಿಯಲ್ಲಿ ಅನುಸರಿಸಿದಲ್ಲಿ ಹೆಚ್ಚಿನ ಅವಘಡ ಸಂಭವಿಸುವುದನ್ನು ತಡೆಯಬಹುದಾಗಿದೆ’ ಎಂದರು. ಅಗ್ನಿ ನಂದಿಸುವ ಉಪಕರಣಗಳನ್ನು ಪ್ರದರ್ಶಿಸಿ, ಅವುಗಳ ಕಾರ್ಯ ವಿಧಾನ ಹಾಗೂ ಬಳಸುವ ಕ್ರಮಗಳನ್ನು ವಿವರಿಸಿದರು.
ತರಿಕೆರೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಉಮರ್ ಬಾದ್‌ಶಹಾ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿದ್ದಬಸಪ್ಪ, ಅಗ್ನಿಶಾಮಕ ದಳದ ಅಧಿಕಾರಿ ಅಶೋಕ್ ಕುಮಾರ್, ಉಪವಲಯ ಅರಣ್ಯಾಧಿಕಾರಿ ಬಿ.ಎಚ್.ದುಗ್ಗಪ್ಪ, ನಿರಂಜನ ಮೂರ್ತಿ, ಮಹೇಂದ್ರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.