ಭದ್ರಾವತಿ: ಗಾಂಜಾ ಪ್ರಕರಣದ ಪ್ರಮುಖ ಆರೋಪಿಯ ಕಾಲಿಗೆ ಹಳೇ ನಗರ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಮಂಗಳವಾರ ಬೆಳಗಿನ ಜಾವ ಆರೋಪಿ ನಸ್ರುಲ್ಲಾ ಅವರನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ಮೌನೇಶ್ ಅವರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಪೊಲೀಸರು ಆರೋಪಿ ನಸ್ರುಲ್ಲಾ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಗಾಯಗೊಂಡಿರುವ ನಸ್ರುಲ್ಲಾ ಅವರನ್ನು ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆರೋಪಿಯ ವಿರುದ್ಧ ಹಲವು ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿಂದೆ ಇದೇ ರೀತಿಯ ಪ್ರಕರಣಗಳಲ್ಲಿ ಪೇಪರ್ ಟೌನ್ ಪೊಲೀಸ್ ಠಾಣೆಯ ಪಿಐ ನಿರೀಕ್ಷಕಿ ನಾಗಮ್ಮ ಎರಡು ಬಾರಿ ಹಾಗೂ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯ ಪಿಎಸ್‌ಐ ಕೃಷ್ಣಕುಮಾರ್ ಮಾನೆ ಅವರು ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.