ADVERTISEMENT

ಘಾಟಿ ಪ್ರದೇಶದಲ್ಲಿ ಮಂಜು: ವಾಹನ ಸಂಚಾರ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 14:19 IST
Last Updated 8 ಆಗಸ್ಟ್ 2020, 14:19 IST
ಹೊಸನಗರ ತಾಲ್ಲೂಕಿನ ಮಳೆ ಹಾನಿ ಸ್ಥಳಕ್ಕೆ ತಾ.ಪಂ. ಅಧ್ಯಕ್ಷ ಆಲುವಳ್ಳಿ ವೀರೇಶ್ ಭೇಟಿ ನೀಡಿದರು
ಹೊಸನಗರ ತಾಲ್ಲೂಕಿನ ಮಳೆ ಹಾನಿ ಸ್ಥಳಕ್ಕೆ ತಾ.ಪಂ. ಅಧ್ಯಕ್ಷ ಆಲುವಳ್ಳಿ ವೀರೇಶ್ ಭೇಟಿ ನೀಡಿದರು   

ಹೊಸನಗರ: ತಾಲ್ಲೂಕಿನಲ್ಲಿ ಮಳೆ ಮುಂದುವರಿದಿದೆ. ನಗರ ಹೋಬಳಿಯಲ್ಲಿ ಮಾಣಿ, ಸಾವೇಹಕ್ಕಲು, ಚಕ್ರಾ ಜಲನಯನ ಪ್ರದೇಶ ಮತ್ತು ಘಟ್ಟ ಪ್ರದೇಶದಲ್ಲಿ ಮಳೆ ಬಿರುಸಾಗಿದೆ. ಘಾಟಿ ಪ್ರದೇಶದಲ್ಲಿ ಮಂಜು ಮುಸುಕಿದ್ದು, ವಾಹನ ಸಂಚಾರ ದುಸ್ತರವಾಗಿದೆ.

ಹುಂಚಾ ಮತ್ತು ಕಸಬಾ, ಕೆರೆಹಳ್ಳಿ ಹೋಬಳಿಯಲ್ಲಿ ಸಾಧಾರಣ ಮಳೆಯಾಗಿದೆ.

ಮಳೆ ಹಾನಿ ಪ್ರದೇಶಗಳಿಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆಲುವಳ್ಳಿ ವೀರೇಶ್ ಭೇಟಿ ನೀಡಿದರು. ಸರ್ಕಾರದ ಪರಿಹಾರ ಶೀಘ್ರ ಕೊಡಿಸುವ ಭರವಸೆ ನೀಡಿದರು.

ADVERTISEMENT

ತಾಲ್ಲೂಕಿನ ವಿವಿಧೆಡೆ ಅಪಾರ ಹಾನಿಯಾಗಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾನುಕೆರೆ ದಂಡೆ ಕುಸಿತ: ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಚ್. ಕುನ್ನೂರು ಗ್ರಾಮದ ಕಾನುಕೆರೆಯ ದಂಡೆ ಗುರುವಾರ ರಾತ್ರಿ ಸುರಿದ ಬಾರಿ ಮಳೆಗೆ ಒಡೆದಿದೆ. ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿನ ಗದ್ದೆಗಳಿಗೆ ಹಾನಿ ಆಗಿದೆ. 15 ಎಕರೆ ಪ್ರದೇಶದ ಭತ್ತ, ಶುಂಠಿ ಬೆಳೆಗಳು ಜಲಾವೃತಗೊಂಡಿವೆ. ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ಜಿ. ಚಂದ್ರಮೌಳಿಗೌಡ ಭೇಟಿ ನೀಡಿ ಪರಿಶೀಲಿಸಿದರು.

ಎಪಿಎಂಸಿ ಸದಸ್ಯ ಕುನ್ನೂರು ಮಂಜಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಯಂತ್, ಪಿಡಿಒ ಶ್ರೀಧರ್ ಆಚಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.