ADVERTISEMENT

ಕುಂಸಿ: ಕಾಲುವೆ ಒತ್ತುವರಿ ತೆರವಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 5:48 IST
Last Updated 27 ಜನವರಿ 2023, 5:48 IST
ಕುಂಸಿ ಸಮೀಪದ ಮಂಡಘಟ್ಟದಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಗುರುವಾರ ಗ್ರಾಮದ ಉಮೇಶ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಕುಂಸಿ ಸಮೀಪದ ಮಂಡಘಟ್ಟದಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಗುರುವಾರ ಗ್ರಾಮದ ಉಮೇಶ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.   

ಕುಂಸಿ: ಕಾಲುವೆ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಕುಂಸಿ ಸಮೀಪದ ಮಂಡಘಟ್ಟ ಗ್ರಾಮ ಪಂಚಾಯಿತಿ ಕಚೇರಿ ಎದುರು ಗುರುವಾರ ಗ್ರಾಮದ ನಿವಾಸಿ ಉಮೇಶ್ ಉಪವಾಸ ಸತ್ಯಾಗ್ರಹ ನಡೆಸಿದರು.

‘ರಾಜ ಕಾಲುವೆ ಒತ್ತುವರಿಯಾಗಿದ್ದು, ಗ್ರಾಮದ ಮನೆಗಳಿಗೆ ಮಳೆ ನೀರು ನುಗ್ಗುತ್ತಿದೆ. ಇದರಿಂದ ಪ್ರತಿವರ್ಷ ಸಂಕಷ್ಟ ಎದುರಾಗುತ್ತಿದೆ. ಈ ಬಗ್ಗೆ ನಾಲ್ಕು ವರ್ಷಗಳಿಂದಲೂ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ’ ಎಂದು ಉಮೇಶ್‌ ದೂರಿದರು.

‘ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಡಿ.26ರಂದು ಉಪವಾಸ ಸತ್ಯಾಗ್ರಹ ನಡೆಸಿದಾಗ ತಾಲ್ಲೂಕು ಪಂಚಾಯಿತಿ ನಿರ್ವಹಣಾಧಿಕಾರಿ ಅವಿನಾಶ್ ಒಂದು ತಿಂಗಳಲ್ಲಿ ಅವರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಗಡುವು ಮುಗಿದರೂ ಸಮಸ್ಯೆ ಬಗೆಹರಿದಿಲ್ಲ’ ಎಂದು ಆರೋಪಿಸಿದರು.

ADVERTISEMENT

ಸಮಸ್ಯೆ ಸರಿಪಡಿಸುವವರೆಗೂ ಧರಣಿ ಕೈಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.