ADVERTISEMENT

ಹೊಸನಗರ: 39 ಕೆ.ಜಿ. ಶ್ರೀಗಂಧ ವಶ

​ಪ್ರಜಾವಾಣಿ ವಾರ್ತೆ
Published 7 ಜೂನ್ 2025, 15:53 IST
Last Updated 7 ಜೂನ್ 2025, 15:53 IST
ಹೊಸನಗರ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶ್ರೀಗಂಧ ಕಳವು ಆರೋಪಿಯನ್ನು ಬಂಧಿಸಿದ್ದಾರೆ
ಹೊಸನಗರ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶ್ರೀಗಂಧ ಕಳವು ಆರೋಪಿಯನ್ನು ಬಂಧಿಸಿದ್ದಾರೆ   

ಹೊಸನಗರ: ಹೊಸನಗರ ವಲಯದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬೆಲೆಬಾಳುವ ಶ್ರೀಗಂಧ ಮರಗಳನ್ನು ಕಡಿದಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. 

ಶನಿವಾರ ಅರಣ್ಯ ಸಂಚಾರಿ ದಳದ ಪೊಲೀಸರು ನಿಖರ ಮಾಹಿತಿ ಮೇರೆಗೆ ಹೊಸನಗರ ವಲಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ, 39 ಕೆ.ಜಿ. 300 ಗ್ರಾಂ ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ದಯಾಕುಮಾರ ಬಂಧಿತ ಆರೋಪಿ.

ಮತ್ತೊಬ್ಬ ಆರೋಪಿ ಕೌಶಿಕ್ ಪರಾರಿಯಾಗಿದ್ದಾನೆ. 

ADVERTISEMENT

ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ ಕೆ. ಮತ್ತು ಸಿಬ್ಬಂದಿ ಹಾಗೂ ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ, ಗಸ್ತು ಅರಣ್ಯ ಪಾಲಕ ಭರತ್ ಕುಮಾರ್ ಹಾಗೂ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.