ಶಿವಮೊಗ್ಗ: ಇಲ್ಲಿನ ಹಾಯ್‌ಹೊಳೆ ಕೆರೆಯಲ್ಲಿ ಕಾಲು ಜಾರಿ ಬಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದಾರೆ.
ಅಲ್ಲಾ ಬಕ್ಷ್ (30) ಮೃತಪಟ್ಟವರು. ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಹಾಯ್‌ಹೊಳೆಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಅವರು ಬುಧವಾರ ಕಾರು ತೊಳೆಯಲು ಕೆರೆಗೆ ಹೋಗಿದ್ದರು. ಕಾರು ತೊಳೆದ ನಂತರ ಸ್ನಾನ ಮಾಡಲು ಕೆರೆಗೆ ಇಳಿದಾಗ ಕಾಲು ಜಾರಿ ಬಿದ್ದಿದ್ದಾರೆ. ಕೆರೆ ಆಳವಾಗಿದ್ದರಿಂದ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.